ಅಭಿಪ್ರಾಯ / ಸಲಹೆಗಳು

ಕೊಡಗು ಜಿಲ್ಲಾ ಸರ್ಕಾರಿ ಆಸ್ಪತ್ರೆ ಮಡಿಕೇರಿಯಲ್ಲಿ ಕೋವಿಡ್-19 ಚಿಕಿತ್ಸೆ ಬಗ್ಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದವರಿಗೆ ಸಂಬಂದಿಸಿದ ನಗದು ಹಣ ಕಾಣೆ ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿಯನ್ನು ಪತ್ತೆಹಚ್ಚುವಲ್ಲಿ ಮಡಿಕೇರಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ಕೊಡಗು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ದಿನಾಂಕ:09-05-2021 ರಂದು ಕೊರೋನಾ ಚಿಕಿತ್ಸೆಗಾಗಿ ದಾಖಲಾಗಿದ್ದ ವ್ಯಕ್ತಿಯೊಬ್ಬರು ದಿನಾಂಕ:23-05-2021 ರಂದು ಐ.ಸಿ.ಯು. ವಾರ್ಡ್ ನಲ್ಲಿ ಮೃತಪಟ್ಟಿದ್ದು, ದಿನಾಂಕ: 20-05-2021 ರಂದು ಬೆಳಿಗ್ಗಿನ ಜಾವ ಅಂದಾಜು 04.00 ಗಂಟೆ ವೇಳೆಯಲ್ಲಿ ರೋಗಿಯು ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಅವರ ಜೇಬಿನಿಂದ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯೊಬ್ಬರು ನಗದು ಹಣವನ್ನು ಕಳ್ಳತನ ಮಾಡಿರುವುದಾಗಿ ನೀಡಿದ ಪುಕಾರಿಗೆ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.

ಮಡಿಕೇರಿ ನಗರ ಠಾಣಾ ಪೊಲೀಸರು ತನಿಖೆ ಕೈಗೊಂಡು ಆರೋಪಿಯ ಬಗ್ಗೆ ಮಾಹಿತಿ ಸಂಗ್ರಹಿಸಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಡಿ ದರ್ಜೆ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಡಿಕೇರಿ ತಾಲ್ಲೂಕು ಜೋಡುಪಾಲ ಗ್ರಾಮದ ನಿವಾಸಿ ಮಹಿಳೆಯೊಬ್ಬರನ್ನು ಬಂಧಿಸಿ ಆರೋಪಿಯಿಂದ, ಕಳ್ಳತನ ಮಾಡಿದ್ದ ನಗದು ಹಣವನ್ನು ವಶಪಡಿಸಿಕೊಂಡಿದ್ದು ವಿಚಾರಣೆಗೆ ಒಳಪಡಿಸಿದಾಗ ಕೋವಿಡ್‌ ನಿಂದ ಮೃತಪಟ್ಟ ಕೂಡಿಗೆ ಗ್ರಾಮದ ನಿವಾಸಿಯೊಬ್ಬರು ದಿನಾಂಕ: 20-05-2021 ರಂದು ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಅವರ ಜೇಬಿನಿಂದ ನಗದು ಹಣವನ್ನು ಕಳ್ಳತನ ಮಾಡಿರುವುದು ತಿಳಿದು ಬಂದಿರುತ್ತದೆ.

ಈ ಪ್ರಕರಣವನ್ನು ಮಡಿಕೇರಿ ಉಪ ವಿಭಾಗ ಡಿವೈ.ಎಸ್.ಪಿ ಬಿ.ಪಿ.ದಿನೇಶ್ ಕುಮಾರ್ ರವರ ಮಾರ್ಗದರ್ಶನದಲ್ಲಿ ಮಡಿಕೇರಿ ನಗರ ವೃತ್ತ ಸಿ.ಪಿ.ಐ ಅನೂಪ್ ಮಾದಪ್ಪ ರವರ ನೇತೃತ್ವದಲ್ಲಿ ಮಡಿಕೇರಿ ನಗರ ಪೊಲೀಸ್ ಠಾಣಾ ಪಿ.ಎಸ್.ಐ ಅಂತಿಮ ಎಂ.ಟಿ, ಎ.ಎಸ್.ಐ. ದಯಾನಂದ, ಅಪರಾಧ ಪತ್ತೆ ಕರ್ತವ್ಯದ ಸಿಬ್ಬಂದಿಗಳಾದ ಕೆ.ಕೆ.ದಿನೇಶ್, ಹೆಚ್.ಎಸ್. ಶ್ರೀನಿವಾಸ, ಪ್ರವೀಣ್ ಬಿ.ಕೆ., ನಾಗರಾಜ್ ಕಡಗನ್ನವರ್, ಅರುಣ್ ಕುಮಾರ್ ಬಿ.ಜಿ, ದಿವ್ಯ, ಭವಾನಿ, ಸೌಮ್ಯ, ರಾಜೇಶ್, ಗಿರೀಶ್ ರವರುಗಳನ್ನು ಒಳಗೊಂಡ ತಂಡವು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿರುತ್ತಾರೆ. ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯವನ್ನು ಶ್ಲಾಘಿಸಲಾಗಿದೆ.

ಇತ್ತೀಚಿನ ನವೀಕರಣ​ : 28-05-2021 04:25 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ