Feedback / Suggestions

ರಸ್ತೆ ಅಪಘಾತ ಪ್ರಕರಣ

                ದಿನಾಂಕ: 27-10-2021 ರಂದು ಮಡಿಕೇರಿ ನಗರದ ಕುಂದುರುಮೊಟ್ಟೆ ದೇವಸ್ಥಾನದ ಬಳಿ ಸಾರ್ವಜನಿಕ ರಸ್ತೆಯಲ್ಲಿ ಕೆಎ-12-ಎ-5611 ರ ಪಿಕ್‌ ಅಪ್‌ ವಾಹನವನ್ನು ಅದರ ಚಾಲಕ ದಿನೇಶ್‌ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಮ್ಮದ್‌ ಶಾಫಿ  ಎಂಬುವವರಿಗೆ ಡಿಕ್ಕಿಪಡಿಸಿದ ಪರಿಣಾಮ ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಮಡಿಕೇರಿ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ , ಮಹಿಳೆ ಸಾವು

                ದಿನಾಂಕ: 27-10-2021 ರಂದು ಕುಶಾಲನಗರದ ಕೊಪ್ಪ ಚೆಕ್‌ ಪೋಸ್ಟ್‌ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-45-ಆರ್-8477‌ ರ ಬೈಕನ್ನು ಸವಾರ ವಾಸುದೇವ ಎಂಬುವವರು ಅತಿ ವೇಗ ಅಜಾಗರೂಕತೆಯಿಂದ ಟಿಎನ್-52-ಕೆ-682 ರ ಲಾರಿಯ ಎಡಭಾಗದಿಂದ ಚಾಲನೆ ಮಾಡಿಕೊಂಡು ಹೋಗುವಾಗ ನಿಯಂತ್ರಣ ತಪ್ಪಿ ಬೈಕ್‌ ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆ ಯೊಬ್ಬರು ರಸ್ತೆಗೆ ಬಿದ್ದಾಗ ಲಾರಿಯ ಚಕ್ರ ಹರಿದು ತೀವ್ರ ಗಾಯಗೊಂಡು ಮೃತಪಟ್ಟಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

                ದಿನಾಂಕ: 27-10-2021 ರಂದು ಕುಶಾಲನಗರ –ಮಡಿಕೇರಿ ಹೆದ್ದಾರಿ ರಸ್ತೆಯ ಗುಡ್ಡೆಹೊಸೂರು ಗ್ರಾಮದ ಬಳಿ ಕೆಎ-46-ಜೆಡ್-4886‌ ರ ಕಾರನ್ನು ಅದರ ಚಾಲಕಿ ಅನುಪಮ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗು ಎದುರುಗಡೆಯಿಂದ ಬರುತ್ತಿದ್ದ ಕೆಎ-46-ಎಲ್-1342‌ ರ ಬೈಕ್‌ ಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್‌ ಸವಾರ ಪ್ರೀತಮ್‌  ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Last Updated: 28-10-2021 03:54 PM Updated By: Admin


Disclaimer :

Please note that this page also provides links to the websites / web pages of Govt. Ministries/Departments/Organisations.The content of these websites are owned by the respective organisations and they may be contacted for any further information or suggestion

Website Policies

 • Copyright Policy
 • Hyperlinking Policy
 • Security Policy
 • Terms & Conditions
 • Privacy Policy
 • Help
 • Screen Reader Access
 • Guidelines

Visitors

 • Last Updated​ :
 • Visitors Counter :
 • Version :
CONTENT OWNED AND MAINTAINED BY : Kodagu District Police
Designed, Developed and Hosted by: Center for e-Governance - Web Portal, Government of Karnataka © 2022, All Rights Reserved.

Best viewed in Chrome v-87.0.4280.141, Microsoft Edge v-87.0.664.75, Firefox -v-83.0 Browsers. Resolution : 1280x800 to 1920x1080