ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 27-11-2021 ರಂದು ಕುಶಾಲನಗರದ ಮಾರ್ಕೆಟ್‌ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-45-ಇಸಿ-5626 ರ ಸ್ಕೂಟರನ್ನು ಸವಾರ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎಎ-12-ಬಿ-1094 ರ ಆಟೋ ರಿಕ್ಷಾಕ್ಕೆ ಡಿಕ್ಕಿಪಡಿಸಿದ ಪರಿಣಾಮ ಆಟೋ ದಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

            ದಿನಾಂಕ: 27-11-2021 ರಂದು ಪೊನ್ನಂಪೇಟೆ ತಾಲ್ಲೂಕು ಬೇಗೂರು ಗ್ರಾಮದ ನಿವಾಸಿ ತಮ್ಮಯ್ಯ ಎಂಬುವವರಿಗೆ ಅದೇ ಗ್ರಾಮದ ನಿವಾಸಿ ಪ್ರತಾಪ್‌ ಎಂಬುವವರು ಹಳೆ ವೈಷಮ್ಯದಿಂದ ದಾರಿ ತಡೆದು ಕೊಲೆ ಮಾಡುವ ಉದ್ದೇಶದಿಂದ ಕತ್ತಿಯಿಂದ ಕಡಿದು ಗಾಯಪಡಿಸಿ ಕೊಲೆ ಬೆದರಿಕೆ ಹಾಕಿದ್ದು ಈ  ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕಳವು ಪ್ರಕರಣ

            ದಿನಾಂಕ: 25-11-2021 ರಿಂದ 27-11-2021 ರ ನಡುವಿನ ದಿನಗಳಲ್ಲಿ ಪೊನ್ನಂಪೇಟೆ ತಾಲ್ಲೂಕು ಮರೂರು ಗ್ರಾಮದ ನಿವಾಸಿ ಸುನಿಲ್‌ ನಾರಾಯಣ್‌ ಎಂಬುವವರ ಮನೆಯಲ್ಲಿ ಅವರ ತೋಟದ ಕೆಲಸ ಮಾಡುವ ಕಾರ್ಮಿಕರು ಇಟ್ಟಿದ್ದ ₹. 14,000 ಮೌಲ್ಯದ ಗ್ರಾಸ್‌ ಕಟರ್‌ ಅನ್ನು ಯಾರೋ ಕಳ್ಳರು ಮನೆಯ ಬಾಗಿಲಿಗೆ ಅಳವಡಿಸಿದ್ದ ಬೀಗವನ್ನು ಮುರಿದು ಕಳ್ಳತನ ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 28-11-2021 12:07 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080