ಅಭಿಪ್ರಾಯ / ಸಲಹೆಗಳು

ಲಾಕ್‌ ಡೌನ್‌ ನಿಯಮ ಉಲ್ಲಂಘನೆ ಪ್ರಕರಣ

                ದಿನಾಂಕ: 28.06.2021ರಂದು ಮಡಿಕೇರಿ ಮುತ್ತಪ್ಪ ದೇವಸ್ಥಾನದ ಬಳಿ ಕೂರ್ಗ್‌ ಕ್ಯಾಬಿನ್‌ ಎಂಬ ಹೋಸ್ಟೇ ಯಲ್ಲಿ  ಮಾಲೀಕ ಕೆ.ಯು ಪೊನ್ನಪ್ಪ  ಎಂಬುವವರು ಪ್ರವಾಸಿಗರಿಗೆ ತಂಗುವ ವ್ಯಸ್ಥೆಯನ್ನು ಮಾಡಿ, ಸಾಂಕ್ರಾಮಿಕ ರೋಗ ಹರಡುವ ಸಂಭವವಿದ್ದರೂ ಸಹಾ ಕೋವಿಡ್‍-19 ಸಾಂಕ್ರಾಮಿಕ ಫ್ಲೈಯಿಂಗ್‌ ಸ್ಕ್ವಾಡ್‌ ಅಧಿಕಾರಿಗಳು ಪರಿಶೀಲನೆ ಮಾಡಿ ನೀಡಿದ ವರದಿ ಮೇರೆ ಮಡಿಕೇರಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಕರ್ತವ ನಿರತ ಸೆಸ್ಕ್‌ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ

            ದಿನಾಂಕ: 28-06-2021 ರಂದು ಗೋಣಿಕೊಪ್ಪ ನಗರ ವ್ಯಾಪ್ತಿಯ ವಿದ್ಯುತ್‌ ಮೆಕ್ಯಾನಿಕ್‌ ರವರಾದ ಜಾನ್ಸನ್‌ ಪ್ರಸಾದ್‌ ಎಂಬುವವರು 2ನೇ ವಿಭಾಗದಲ್ಲಿ ವಿದ್ಯುತ್‌ ಸಂಬಂದಿಸಿದ ಕೆಲಸ ಮಾಡುವಾಗ ಚೆನ್ನಂಗೊಲ್ಲಿ ನಿವಾಸಿ ಶಾಜಿ ಮತ್ತು ಇತರ ಮೂವರು ಕ್ಷುಲ್ಲಕ ಕಾರಣಕ್ಕೆ ಕರ್ತವ್ಯಕ್ಕೆ ಅಡ್ಡಿಪಡಿಸಿ ಸಮವಸ್ತ್ರ ಹರಿದುಹಾಕಿ ಹಲ್ಲೆ ಮಾಡಿ ನೋವುಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಹಲ್ಲೆ ಪ್ರಕರಣ

            ದಿನಾಂಕ 28-06-2021 ರಂದು ಸೋಮವಾರಪೇಟೆ ಪಟ್ಟಣದ ಅಶೋಕ ರಸ್ತೆ ನಿವಾಸಿ ಮಾದೇವಪ್ಪ ಎಂಬುವವರಿಗೆ ಅವರ ಪಕ್ಕದ ಮನೆಯ ವಾಸಿ ಲಕ್ಷ್ಮಿನಾರಾಯಣ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿ ಗಾಯಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ  ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ರಸ್ತೆ ಅಪಘಾತ , ವ್ಯಕ್ತಿ ಸಾವು.

            ದಿನಾಂಕ: 28-06-2021 ರಂದು ವಿರಾಜಪೇಟೆ ತಾಲ್ಲೂಕು ಅರಮೇರಿ ಗ್ರಾಮದ ಬಳಿ ರಸ್ತೆಯಲ್ಲಿ ಕೆಎ-12-ಕ್ಯೂ-1681 ರ ಸ್ಕೂಟರನಲ್ಲಿ ಸವಾರ ಚಂಗಪ್ಪ ಎಂಬುವವರು ಹೋಗುತ್ತಿರುವಾಘ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಗುಂಡಿಗೆ ಬಿದ್ದ ಪರಿಣಾಮ ಗಾಯಗೊಂಡು ಮೃತಪಟ್ಟಿದ್ದು ಈ ಬಗ್ಗೆ ನೀಡಿದ ದೂರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 29-06-2021 05:49 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ