ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 273082021 ರಂದು ಕುಶಾಲನಗರದ ಮಾದಾಪಟ್ಟಣ ಗ್ರಾಮದ ಬಳಿ ಹೆದ್ದಾರಿ ರಸ್ತೆಯಲ್ಲಿ ಕೆಎ-45-ವೈ-8886 ನೋಂದಣಿ ಸಂಖ್ಯೆಯ ಬೈಕನ್ನು ಅದರ ಸವಾರ ದರ್ಶನ್‌ ಎಂಬುವವರು ಅತಿವೇಗ ಮತ್ತುಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಅಶ್ರಫ್‌ ಎಂಬುವವರಿಗೆ ಡಿಕ್ಕಿಪಡಿಸಿದ ಪರಿಣಾಮ ನಿದ್ದು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ದೂರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಹಲ್ಲೆ ಪ್ರಕರಣ

            ದಿನಾಂಕ: 28-08-2021 ರಂದು ಸೋಮವಾರಪೇಟೆ ತಾಲ್ಲೂಕು ಕಾಂಡನಕೊಲ್ಲಿ ಗ್ರಾಮದ ನಿವಾಸಿ ಗಣಪತಿ ಎಂಬುವವರಿಗೆ ಅವರ ಮಗ ಪವನ್‌ ಎಂಬುವವರು ಕ್ಷುಲ್ಲಕ ಕಾರಣಕ್ಕೆ ದೊಣ್ಣೆಯಿಂದ ಹಲ್ಲೆ ಮಾಡಿ ಗಾಯಪಡಿಸಿದ್ದು ಈ ಬಗ್ಗೆ ನೀಡಿದ ದೂರಿನ ಮೇರೆ ಸುಂಟಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಕಳವು ಪ್ರಕರಣ

            ದಿನಾಂಕ: 22-08-2021 ರಂದು ಮಡಿಕೇರಿ ತಾಲ್ಲೂಕು ಕಾನನ್‌ ಕಾಡು ಬಳಿ ಗ್ರೀನ್‌ ಫೀಲ್ಡ್‌ ಎಸ್ಟೇಟ್‌ ಮುಂಭಾಗದ ಗೇಟ್‌ ಬಳಿ ಮುರುಗನ್‌ ಎಂಬುವವರು ನಿಲ್ಲಿಸಿದ್ದ ಟಿ.ಎನ್‌ 28ಎಸಿ-0466 ನೋಂದಣಿ ಸಂಖ್ಯೆಯ ಬೈಕನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ದಿನಾಂಕ 28-08-2021 ರಂದು ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರನ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಕಳವು ಪ್ರಕರಣ.

            ದಿನಾಂಕ: 28-08-2021 ರಂದು ಕುಶಾಲನಗರ ಗ್ರಾಮಾಂತರ ಠಾಣೆ ಪಿಎಸ್‌ಐ ಶಿವಶಂಕರ್‌ ಮತ್ತು ಸಿಬ್ಬಂದಿಯವರು ಸರಹದ್ದಿನ ಕೂಡಿಗೆ ಗ್ರಾಮದ ಬಳಿ ವಾರಾಂತ್ಯ ಕರ್ಫ್ಯೂ ಸಂಬಂಧ ಗಸ್ತು ಕತ್ರವ್ಯದಲ್ಲಿರುವಾಗ ಬೈಕ್‌ ಸವಾರನೊಬ್ಬ ಬೈಕನ್ನು ಚಾಲನೆ ಮಾಡಿಕೊಂಡು ಬರುತ್ತಿರುವಾಗ ನಿಲ್ಲಿಸಲು ಸೂಚಿಸಿದಾಗ ನಿಲ್ಲಿಸದೇ ಅತಿವೇಗವಾಗಿ ಹೋದವನನ್ನು ಮುಂದೆ ಕರ್ತವ್ಯದಲ್ಲಿದ್ದ ಪೊಲೀಸರು ಬ್ಯಾರಿಕೇಡ್‌ ಎಳೆದು ತಡೆದು ನಿಲ್ಲಿಸ ಪರಿಶೀಲಿಸಿದಾಗ ಮಡಿಕೇರಿ ತಾಲ್ಲೂಕು ಕಕ್ಕಬೆ ಗ್ರಾಮದ ನಿವಾಸಿ ಆಶೋಕ್‌ ಎಂಬ ವ್ಯಕ್ತಿಯಾಗಿದ್ದು ಆತನು  ನೋಂದಣಿ ಸಂಖ್ಯೆ ಕೆಎ-೦4-ಹೆಚ್ಎಫ್‌-9743 ರ ಬೈಕನ್ನು ಒಂಟಿಅಂಗಡಿ ಅಮ್ಮತ್ತಿ ಗ್ರಾಮದಿಂದ ಕಳವು ಮಾಡಿದ್ದು ಹಾಗೂ ಆತನ ವಶದಲ್ಲಿದ್ದ ಒಂದು ಡಿಬಿಬಿಎಲ್‌ ಬಂದೂಕನ್ನು ಅಭ್ಯತ್‌ಮಂಗಲದಿಂದ ಕಳವು ಮಾಡಿರುವುದಾಗಿ  ತಿಳಿಸಿದ ಮೇರೆ ವಶಕ್ಕೆ ಪಡೆದು ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 29-08-2021 06:07 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ