ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 28-09-2021 ರಂದು ಕುಶಾಲನಗರ-ಮಡಿಕೇರಿ ಹೆದ್ದಾರಿ ರಸ್ತೆಯ ಆನೆಕಾಡು ಬಳಿ ಕೆಎ-19-ಇಎಚ್-7404 ರ ಬೈಕನ್ನು ಅದರ ಸವಾರ ಸನೋಜ್‌ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-46-ಇ-1113 ರ ಬೈಕ್‌ ಗೆ ಡಿಕ್ಕಿಪಡಿಸಿದ ಪರಿಣಾಮ ಪ್ರಕಾಶ್‌, ಸನೋಜ್‌, ಪ್ರವೀಣ್‌ ಎಂಬುವವರು ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

            ದಿನಾಂಕ: 28-09-2021 ರಂದು ಸೋಮವಾರಪೇಟೆ ತಾಲ್ಲೂಕು ಯಡೂರು ಗ್ರಾಮದ ನಿವಾಸಿ ಜಗದೀಶ್ ಎಂಬುವವರು ಅವರ ಅಂಗಡಿಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯವನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಮಾಡುತ್ತಿದ್ದ ಪ್ರಕರಣವನ್ನು ಸೋಮವಾರಪೇಟೆ ಠಾಣೆ ಪೊಲೀಸರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಬೈಕ್‌ ಕಳವು ಪ್ರಕರಣ

            ದಿನಾಂಕ: 28-09-2021 ರಂದು ಕುಶಾಲನಗರ ತಾಲ್ಲೂಕು ಹೆಬ್ಬಾಲೆ ಗ್ರಾಮದ ಮಾರ್ಕೆಟ್‌ ಬಳಿಯಿಂದ ಕೆಎ-45-ಕೆ-4564  ನೋಂದಣಿ ಸಂಖ್ಯೆಯ ಬೈಕನ್ನು ರಾಮನಾಥಪುರ ನಿವಾಸಿಗಳಾದ ಶರತ್‌ ಮತ್ತು ದಿಲೀಪ್‌ ಎಂಬುವವರು ಕಳವು ಮಾಡಿಕೊಂಡು ಹೋಗಿ ಗುಡ್ಡೆಹೊಸೂರು ಗ್ರಾಮದ ಬಳಿ ಮಾರಾಟ ಮಾಡಲು ಪ್ರಯತ್ತಿಸುತ್ತಿರುವಾಗ ಕುಶಾಲನಗರ ಗ್ರಾಮಾಂತರ ಠಾಣೆ ಪಿಎಸ್‌ಐ ಶಿವಶಂಕರ್‌ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 29-09-2021 01:11 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080