ಅಭಿಪ್ರಾಯ / ಸಲಹೆಗಳು

ಕಳವು ಪ್ರಕರಣ

                ದಿನಾಂಕ; 27-10-2021 ರಂದು ರಾತ್ರಿ ಕುಶಾಲನಗರ ಪಟ್ಟಣದ ಕಾವೇರಿ ಬಡಾವಣೆ ನಿವಾಸಿ ನೌಷದ್‌ ಎಂಬುವವರ ಮನೆಯ ಹಿಂಬಾಗಿಲನ್ನು ಯಾರೋ ಕಳ್ಳರು ಮುರಿದು ಒಳನುಗ್ಗಿ ಬೀರುವಿನಲ್ಲಿಟ್ಟಿದ್ದ ₹. 80 ಸಾವಿರ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ಧಾರೆ.

ರಸ್ತೆ ಅಪಘಾತ ಪ್ರಕರಣ

                ದಿನಾಂಕ: 28-10-2021 ರಂದು ಗೋಣೀಕೊಪ್ಪ – ವಿರಾಜಪೇಟೆ ಮುಖಯ ರಸ್ತೆಯ ಲಯನ್ಸ್‌ ಶಾಲೆಯ ಬಳಿ ಕೆಎ-03-ಎಂಎಂ-825 ರ ಕಾರನ್ನು ಅದರ ಚಾಲಕ ರಿಷ್ವಿನ್‌ ಎಂಬುವವರು ಅತಿವೇ ಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-12-ಪಿ-6530 ರ ಕಾರಿಗೆ ಡಿಕ್ಕಿಪಡಿಸಿದ ಪರಿಣಾಮ ಕಾರು ಜಕಂಗೊಂಡು ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ಧಾರೆ.

ರಸ್ತೆ ಅಪಘಾತ ಪ್ರಕರಣ

                ದಿನಾಂಕ: 28-10-2021 ರಂದು ಪೊನ್ನಂಪೇಟೆ ತಾಲ್ಲೂಕು ಕೈಕೇರಿ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-ಎಲ್-3497‌ ರ ಕಾರನ್ನು ಅದರ ಚಾಲಕ ಪ್ರದೀಪ್‌ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದುದರಿಂದ ಕಾರಿನಲ್ಲಿದ್ದ ಸಹ ಪ್ರಯಾಣಿಕರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ಧಾರೆ.

ಕೊಲೆ ಯತ್ನ ಪ್ರಕರಣ

                ದಿನಾಂಕ: 27-10-2021 ರಂದು ರಾತ್ರಿ ವಿರಾಜಪೇಟೆ ತಾಲ್ಲೂಕು ಬೇಟೋಳಿ ಗ್ರಾಮದ ನಿವಾಸಿ ರಾಜ ಎಂಬುವವರಿಗೆ ಅವರ ಪಕ್ಕದ ಮನೆಯ ನಿವಾಸಿ ರಾಮಚಂದ್ರ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡುವ ಉದ್ದೇಶದಿಂದ ಕತ್ತಿಯಿಂದ ಹಲ್ಲೆ ಮಾಡಿ ಗಾಯಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ಧಾರೆ.

ಇತ್ತೀಚಿನ ನವೀಕರಣ​ : 29-10-2021 04:50 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080