ಅಭಿಪ್ರಾಯ / ಸಲಹೆಗಳು

ಕಳವು ಪ್ರಕರಣ

            ದಿನಾಂಕ: 27-03-2022 ರಂದು ಪೊನ್ನಂಪೇಟೆ ತಾಲ್ಲೂಕು ಬೆಸಗೂರು ಗ್ರಾಮದ ನಿವಾಸಿ ಎ.ಶಿಬಿನ್‍ ಎಂಬುವವರು ಬೆಸಗೂರು ಗ್ರಾಮದ ಸೇತುವೆ ಬಳಿ ನಿಲ್ಲಿಸಿದ್ದ ಕಾರಿನಲ್ಲಿ ಇಟ್ಟಿದ್ದ ₹. 89,310 ಮೌಲ್ಯದ ಪಿಸ್ತೂಲನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಪೊನ್ನಂಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

                ದಿನಾಂಕ: 29-03-2022 ರಂದು ಪೊನ್ನಂಪೇಟೆ ತಾಲ್ಲೂಕು ಜೋಡುಬೀಟಿ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-ಹೆಡ್-0174 ರ ಕಾರನ್ನು ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-12-ವಿ-0012 ರ ಸ್ಕೂಟರ್‍ ಗೆ ಡಿಕ್ಕಿಪಡಿಸಿದ ಪರಿಣಾಮ ಸ್ಕೂಟರ್‍ ಸವಾರ  ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

                ದಿನಾಂಕ: 29-03-2022 ರಂದು ವಿರಾಜಪೇಟೆ ಪಟ್ಟಣದ ಮೀನುಪೇಟೆ ಬಳಿಯ ಕೋಳಿ ಮಳಿಗೆ ನಡೆಸುತ್ತಿರುವ ಬಷೀರ್‍ ಮತ್ತು  ಹೆಗ್ಗಳ ಗ್ರಾಮದ ನಿವಾಸಿ  ಶಫೀಕ್‍ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಪರಸ್ಪರ ಹಲ್ಲೆ ಮಾಡಿಕೊಂಡು  ಗಾಯಪಡಿಸಿದ್ದು ಈ ಬಗ್ಗೆ ಉಭಯ ಕಡೆಯವರು ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಗಾಂಜಾ ಮಾರಾಟ ಪ್ರಕರಣ

                ದಿನಾಂಕ: 29-03-2022 ರಂದು ಸೋಮವಾರಪೇಟೆ ಪಟ್ಟಣದ ಆನೆಕರೆ ಬಳಿ ನೇಗಳ್ಳೆ ಕಕರ್ಕಳ್ಳಿ ಗ್ರಾಮದ ನಿವಾಸಿ ದರ್ಶನ್‍ ಎಂಬುವವರು  ಅವರ ಸ್ಕುಟರ್‍ ನಲ್ಲಿ ಅಕ್ರಮವಾವಾಗಿ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಪ್ರಕರಣ ವನ್ನು ಸೋಮವಾರಪೇಟೆ  ಠಾಣೆ ಪಿ.ಎಸ್.ಐ ವಿರೂಪಾಕ್ಷ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 30-03-2022 01:49 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080