ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 29-04-2022 ರಂದು ಕುಶಾಲನಗರ ತಾಲ್ಲೂಕು ಕೂಡ್ಲೂರು ಗ್ರಾಮದ ಬಳಿ ಹೆದ್ದಾರಿ ರಸ್ತೆಯಲ್ಲಿ ಕೆಎ-12-ಬಿ-4364 ರ ಗೂಡ್ಸ್‌ ವಾಹನವನ್ನು ಚಾಲಕ ಅಮಿತ್‌ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-12-ಎಸ್-8321‌ ರ ಬೈಕ್‌ ಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್‌ ಸವಾರ ವಿವೇಕ್‌ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ  ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಮರಳು ಸಾಗಾಟ ಪ್ರಕರಣ

          ದಿನಾಂಕ: 29-04-2022 ರಂದು ವಿರಾಜಪೇಟೆ ಠಾಣಾ ಪಿ.ಎಸ್.ಐ ರವರಿಗೆ ಅಕ್ರಮ ಮರಳು ಸಾಗಾಟದ ಬಗ್ಗೆ ಬಂದ ಖಚಿತ ವರ್ತಮಾನದ ಮೇರೆ ಪಿ.ಎಸ್.ಐ ಮತ್ತು ಸಿಬ್ಬಂದಿಯವರು ವಿರಾಜಪೇಟೆ ತಾಲ್ಲೂಕು ದೇವಣಗೇರಿ ಗ್ರಾಮದ ಬಳಿ ಅಕ್ರಮವಾಗಿ ಕೆಎ-12-ಎ-4724 ರ ಪಿಕ್‌ ಅಪ್‌ ವಾಹನದಲ್ಲಿ ಮರಳು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಮಾಡಿದ್ದು ಚಾಲಕ ಮಹಮದ್‌ ಆಲಿ ಎಂಬುವವರ ವಿರುದ್ದ ಪಿ.ಎಸ್.ಐ ಸಿದ್ದಲಿಂಗ ಬಾನಸೆ  ರವರು ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಕಳವು ಪ್ರಕರಣ

            ದಿನಾಂಕ; 27-04-2022 ರಿಂದ 29-04-2022 ರ ನಡುವಿನ ದಿನಗಳಲ್ಲಿ ಪೊನ್ನಂಪೇಟೆ ತಾಲ್ಲೂಕು ಮಾಯಮುಡಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಗೆ ಯಾರೋ ಕಳ್ಳರು ಒಳನುಗ್ಗಿ ಪ್ರಯೋಗಾಲಯ ಕಟ್ಟಡದ ಬಾಗಿಲು ಮುರಿದು ಒಳಗಿದ್ದ ವೈಜ್ಞಾನಿಕ ಉಪಕರಣಗಳನ್ನು ಹಾನಿ ಮಾಡಿ ₹. 18,000 ಮೌಲ್ಯದ ಒಂದು ಪ್ರೊಜೆಕ್ಟರ್‌ ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ಶಾಲಾ ಮುಖ್ಯೋಪಾಧ್ಯಾರು ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

          ದಿನಾಂಕ: 29-04-2022 ರಂದು ಸೋಮವಾರಪೇಟೆ ತಾಲ್ಲೂಕು ಶನಿವಾರಸಂತೆ ನಾಕಲಗೋಡು ಗ್ರಾಮದ ನಿವಾಸಿ ಪರಮಶಿವಯ್ಯ ಎಂಬುವವರು ಗ್ರಾಮದ  ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಸಾರ್ವಜನಿಕರು ಮದ್ಯಸೇವನೆ ಮಾಡಲು ಅವಕಾಶ ಮಾಡಿಕೊಡುತ್ತಿದ್ದ ಪ್ರಕರಣವನ್ನು ಶನಿವಾರಸಂತೆ ಠಾಣೆ ಪಿಎಸ್‌ಐ ಗೋವಿಂದರಾಜು ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಇತ್ತೀಚಿನ ನವೀಕರಣ​ : 30-04-2022 07:52 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080