ಅಭಿಪ್ರಾಯ / ಸಲಹೆಗಳು

ಕಳವು ಪ್ರಕರಣ

            ದಿನಾಂಕ: 02-07-2021 ರಂದು ಮಡಿಕೇರಿ ತಾಲ್ಲೂಕು ಕಿರುಂದಾಡು ಗ್ರಾಮದ ನಿವಾಸಿ ರಾಧಾಕೃಷ್ಣ ಎಂಬುವವರು ಮನೆಗೆ ಬೀಗ ಹಾಕಿಕೊಂಡು ಬೆಂಗಳೂರುಗೆ ಹೋಘಿ ವಾಪಾಸ್ಸು ದಿನಾಂಕ: 29-07-2021 ರಂದು ಬಂದು ನೋಡಿದಾಗ ಯಾರೋ ಕಳ್ಳರು ಮನೆಗೆ ನುಗ್ಗಿ ಗಾಡ್ರೆಜ್‌ ಬೀರುವಿನಲ್ಲಿ ಹಾಗು ಮನೆಯೊಳಗೆ ಇಟ್ಟಿದ್ದ ಮದ್ಯ ಹಾಗೂ ಎಲೆಕ್ಟ್ರಾನಿಕ್‌ ಉಪಕರಣ ಸೇರಿ ಒಟ್ಟು ₹. 65,000 ಮೌಲ್ಯದ ವಸ್ತುಗಳನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ದಿನಾಂಕ: 29-07-2021 ರಂದು ನೀಡಿದ ದೂರಿನ ಮೇರೆ ನಾಪೋಕ್ಲು ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ರಸ್ತೆ ಅಪಘಾತ ಪ್ರಕರಣ

            ದಿನಾಂಕ: 28-07-2021 ರಂದು ಪೊನ್ನಂಪೇಟೆ ತಾಲ್ಲೂಕು ಹುದಿಕೇರಿ ಕೋಣಂಗೇರಿ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಒಂದು ಟಿಪ್ಪರ್‌ ಲಾರಿಯನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುಗಡೆಯಿಂದ ಬರುತ್ತಿದ್ದ ಕೆಎ-12-ಕ್ಯೂ-2054 ರ ಸ್ಕೂಟರ್‌ಗೆ ಡಿಕ್ಕಿಪಡಿಸಿದ ಪರಿಣಾಮ ಹಿಂಬದಿ ಸವಾರ ಯೂಸುಫ್‌ ಎಂಬುವವರು ಬಿದ್ದು ಗಾಯಗೊಂಡಿದ್ದು , ಡಿಕ್ಕಿಪಡಿಸಿದ ನಂತರ ಲಾರಿಯನ್ನು ಚಾಲಕನು ನಿಲ್ಲಿಸದೇ ಹೋಗಿದ್ದು ಈ ಬಗ್ಗೆ ನೀಡಿದ ದೂರಿನ ಮೇರೆ ‍ಶ್ರೀಮಂಗಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಕಾರಿಗೆ ಬೈಕ್‌ ಡಿಕ್ಕಿ, ಸವಾರ ಸಾವು.

            ದಿನಾಂಕ: 28-07-2021 ರಂದು ರಾತ್ರಿ ಸೋಮವಾರಪೇಟೆ ತಾಲ್ಲೂಕು ಶನಿವಾರಸಂತೆ ಗ್ರಾಮದ ಕಾಜೂರು ಮುಖ್ಯ ರಸ್ತೆಯಲ್ಲಿ ಕೆಎ-01-ಆರ್-0711‌ ರ ಬೈಕನ್ನು ಅದರ ಸವಾರ ಸುಂದರ ಆಚಾರ್‌ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದರುಗಡೆಯಿಂದ ಬರುತ್ತಿದ್ದ ಕೆಎ-20-ಎಂ-7322 ರ ಕಾರಿಗೆ ಡಿಕ್ಕಿಯಾಗಿ ಗಾಯಗೊಂಡವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದು ಈ ಬಗ್ಗೆ ನೀಡಿದ ದೂರಿನ ಮೇರೆ ಶನಿವಾರಸಂತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

            ದಿನಾಂಕ: 29-07-2021 ರಂದು ಸೋಮವಾರಪೇಟೆ ತಾಲ್ಲೂಕು ಗಣಗೂರು ಗ್ರಾಮದ ನಿವಾಸಿ ಮಂಜುನಾಥ್‌ ಎಂಬುವವರು ಅವರ ಅಂಗಡಿ ಮುಂಭಾಗದಲ್ಲಿ ಅಕ್ರಮವಾಗಿ ಸಾರ್ವಜನಿಕರು ಮದ್ಯಸೇವನೆಗೆ ಅವಕಾಶ ಮಾಡುತ್ತಿದ್ದ ಪ್ರಕರಣವನ್ನು ಸೋಮವಾರಪೇಟೆ ಠಾಣೆ ಪೊಲೀಸರು ಪತ್ತೆ ಮಾಡಿ ಕಾನೂನು ಕ್ರಮ ಕೈಗೊಂಡಿದ್ದಾರೆ.

 ವಿದ್ಯುತ್‌ ಸ್ಪರ್ಷಗೊಂಡು ಕಾಡಾನೆ ಸಾವು ಪ್ರಕರಣ

            ದಿನಾಂಕ: 29-07-2021 ರಂದು ಕುಶಾಲನಗರ ತಾಲ್ಲೂಕು ಬಸವನಹಳ್ಳಿ ಗ್ರಾಮದ ಹೊಸಕಾಡು ನಿವಾಸಿ ಚಂದ್ರ ಎಂಬುವವರು ಅವರ ಜಮೀನಿನ ತಂತಿ ಬೇಲಿಗೆ ಸೋಲಾರ್‌ ವಿದ್ಯುತ್‌ ಅಳವಡಿಸದೇ ನೇರವಾಗಿ ಮನೆಯ ವಿದ್ಯುತ್‌ ಸಂಪರ್ಕದಿಂದ ಇನವರ್ಟರ್‌ ಮೂಲಕ ಅಕ್ರಮವಾಗಿ ವಿದ್ಯುತ್‌ ಸಂಪರ್ಕವನ್ನು ನೀಡಿದ್ದು , ಅತ್ತೂರು ಮೀಸಲು ಅರಣ್ಯದಿಂದ ಬಂದ ಕಾಡಾನೆಯೊಂದು ಬೇಲಿಯ ತಂತಿಗೆ ಅಳವಡಿಸಿದ್ದ ವಿದ್ಯುತ್‌ ಸ್ಪರ್ಷಗೊಂಡು ಮೃತಪಟ್ಟಿದ್ದು ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ನೀಡಿದ ಪುಕಾರಿನ ಮೇರೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 30-07-2021 07:45 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ