ಅಭಿಪ್ರಾಯ / ಸಲಹೆಗಳು

ಹಲ್ಲೆ ಪ್ರಕರಣ

            ದಿನಾಂಕ: 29-09-2021 ರಂದು ಸೋಮವಾರಪೇಟೆ ತಾಲ್ಲೂಕು ಕರ್ಕಳ್ಳಿ ಗ್ರಾಮದ ನಿವಾಸಿ ರವಿ ಮತ್ತು ಅವರ ಮಗ ಸಂಜಯ್‌ ಮತ್ತು ತಣ್ಣಿರುಹಳ್ಳ ನಿವಾಸಿ ರವಿ ಎಂಬುವವರಿ ಕೋಳಿ ಕಾಣೆಯಾಗಿದ್ದ ವಿಚಾರದಲ್ಲಿ ಪರಸ್ಪರ ಜಗಳ ಮಾಡಿಕೊಂಡು ಹಲ್ಲೆ ಮಾಡಿ ಗಾಯಪಡಿಸಿದ್ದು ಈ ಬಗ್ಗೆ ಉಭಯ ಕಡೆಯವರು ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

            ದಿನಾಂಕ: 29-09-2021 ರಂದು ಸೋಮವಾರಪೇಟೆ ತಾಲ್ಲೂಕು ಯಡವನಾಡು ಗ್ರಾಮದ ಬಳಿ ಅಂದಗೋವೆ ಗ್ರಾಮದ ನಿವಾಸಿ ವಿನ್ಸೆಂಟ್‌ ಎಂಬುವವರಿಗೆ ರಾಜು ಮತ್ತು ದೊರೆ ಎಂಬುವವರು ಬೈಕ್‌ ಮತ್ತು ಲಾರಿ ನಡುವೆ ರಸ್ತೆ ಅಪಘಾತವಾದ ವಿಚಾರದಲ್ಲಿ ಜಗಳ ಮಾಡಿ ಕಲ್ಲಿನಿಂದ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಗಾಂಜಾ ಮಾರಾಟ ಪ್ರಕರಣ

            ದಿನಾಂಕ 29-09-2021 ರಂದು ವಿರಾಜಪೇಟೆ ನಗರದ ಮಡಿಕೇರಿ ರಸ್ತೆಯ ಕುಲುಮೆ ಜಂಕ್ಷನ್‌ ಬಳಿ ಸಾದಿಕ್‌, ಬೋಪಣ್ಣ,ರೋಷನ್‌, ಅಲ್ತಾಫ್‌ಎಂಬುವವರು ಕಾರು ಮತುತ ಸ್ಕೂಟರ್‌ ನಿಲ್ಲಿಸಿಕೊಂಡು ಅಕ್ರಮವಾಗಿ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ವಿರಾಜಪೇಟೆ ನಗರ ಠಾಣೆ ಪಿಎಸ್‌ಐ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಎಟಿಎಂ ವಂಚನೆ ಪ್ರಕರಣ ಪತ್ತೆ. ಆರೋಪಿ ಬಂಧನ.

ಕೊಡಗು ಜಿಲ್ಲಾ ಸಿಇಎನ್ ಅಪರಾದ ಪೊಲೀಸ್ ಠಾಣೆ ಮೊ ಸಂ 19/2021 ಕಲಂ 66(ಸಿ) &(ಡಿ) ಐ.ಟಿ ಕಾಯ್ದೆ ಮತ್ತು 419, 420 ಐಪಿಸಿ ಮತ್ತು ಮೊ ಸಂ 20/2021 ಕಲಂ 66(ಸಿ) &(ಡಿ) ಐ.ಟಿ ಕಾಯ್ದೆ ಮತ್ತು 419, 420 ಐಪಿಸಿ (ಎಟಿಎಂ/ಡೆಬಿಟ್ ಕಾರ್ಡ್ ವಂಚನೆ) ಪ್ರಕರಣದಲ್ಲಿ ಆರೋಪಿ ಕಿರಣ್ ಕುಮಾರ್, ತಂದೆ ಪೌತಿ ಕಾಳೇಗೌಡ, ಪ್ರಾಯ 30 ವರ್ಷ, ವಾಸ ಬೆಲಸಿಂದ ಗ್ರಾಮ, ಗುಲಸಿಂದ ಅಂಚೆ, ಶ್ರವಣಬೆಳಗೋಳ ಹೋಬಳಿ, ಚೆನ್ನರಾಯಪಟ್ಟಣ ತಾಲೂಕು, ಹಾಸನ ಜಿಲ್ಲೆ ಈತನನ್ನು ದಸ್ತಗಿರಿ ಮಾಡಿ ಈತನಿಂದ ಪ್ರಕರಣಕ್ಕೆ ಸಂಬಂದಿಸಿದಂತೆ ಒಟ್ಟು 58 ಗ್ರಾಂ ಚಿನ್ನಾಭರಣಗಳು ಹಾಗೂ ಒಟ್ಟು 294 ಗ್ರಾಂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

 

ಇತ್ತೀಚಿನ ನವೀಕರಣ​ : 30-09-2021 06:00 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080