ಅಭಿಪ್ರಾಯ / ಸಲಹೆಗಳು

ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಕೊಲೆ

            ದಿನಾಂಕ: 28-12-2020 ರಂದು ರಾತ್ರಿ ಪೊನ್ನಂಪೇಟೆ ತಾಲ್ಲೂಕು ನಾಲ್ಕೇರಿ ಗ್ರಾಮದ ಬಣ್ಣಮೊಟ್ಟೆ ನಿವಾಸಿ ಮಹೇಶ್‍ ಎಂಬುವವರ ಕಾಫಿ ತೋಟದಲ್ಲಿ ಕೆಲಸ ಮಾಡಿಕೊಂಡು ಲೈನ್‍ ಮನೆಯಲ್ಲಿ ವಾಸವಿದ್ದ ಕುಮಾರ ಎಂಬುವವರಿಗೆ ರಾಜ ಎಂಬುವವರು ಊಟದ ವಿಚಾರದಲ್ಲಿ ಜಗಳಮಾಡಿ ಹಲ್ಲೆ ಮಾಡಿ ಕೊಲೆ ಮಾಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಟ್ಟ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಹಲ್ಲೆ ಪ್ರಕರಣ

            ದಿನಾಂಕ: 27-12-2020 ರಂದು ಪೊನ್ನಂಪೇಟೆ ತಾಲ್ಲೂಕು ಪರಕಟಗೇರಿ ಗ್ರಾಮದ ನಿವಾಸಿ ಕರ್ತಮಾಡ ಸಂಜಯ್‍ ಎಂಬುವವರಿಗೆ ಕರ್ತಮಾಡ ವಿಜಯ ಎಂಬುವವರು ಹಣಕಾಸಿನ ವಿಚಾರದಲ್ಲಿ ಜಗಳ ಮಾಡಿ ಕೈಯಿಂದ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಶ್ರೀಮಂಗಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 29-12-2020 ರಂದು ಸೋಮವಾರಪೇಟೆ ತಾಲ್ಲೂಕು ಸುಂಟಿಕೊಪ್ಪ ಗದ್ದೆಹಳ್ಳ ನಿವಾಸಿ ಸಾಧಿಕ್‍ ಎಂಬುವವರು ಅವರ ಕೆಎ-09-ಇಪಿ-3400 ರ ಸ್ಕೂಟರ್‍ ನಲ್ಲಿ ಸುಂಟಿಕೊಪ್ಪದಿಂದ ಕುಶಾಲನಗರಕ್ಕೆ ಹೋಗುತ್ತಿರುವಾಗ ಅಂದಗೋವೆ ಜಂಕ್ಷನ್‍ ಬಳಿ ಕೆಎ-01-ಎಂಎನ್-4785 ರ ಕಾರನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿ ಸ್ಕೂಟರ್‍ಗೆ ಡಿಕ್ಕಿಪಡಿಸಿದ ಪರಿಣಾಮ ಸವಾರ ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸುಂಟಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕಾಫಿ ಕಳವು ಪ್ರಕರಣ

            ದಿನಾಂಕ: 27-12-2020 ರಂದು ಸೋಮವಾರಪೇಟೆ ತಾಲ್ಲೂಕು ಕೋಣಿಗನಹಳ್ಳಿ ಗ್ರಾಮದ ನಿವಾಸಿ ಪರಮೇಶ್‍ ಎಂಬುವವರು ಒಣಗಿದ ಕಾಫಿಯನ್ನು ಚೀಲಗಳಲ್ಲಿ ತುಂಬಿಸಿ ತೋಟದ ಮನೆಯಲ್ಲಿ ಇಟ್ಟಿದ್ದರು. ದಿನಾಂಕ: 29-12-2020 ರಂದು ನೋಡಿದಾಗ  ಯಾರೋ ಕಳ್ಳರು ಮನೆಯ ಕಿಟಕಿಯ ಸರಳುಗಳನ್ನು ಮುರಿದು ₹. 80,000 ಮೌಲ್ಯದ ಕಾಫಿಯನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಶನಿವಾರಸಂತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 30-12-2020 04:11 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080