ಅಭಿಪ್ರಾಯ / ಸಲಹೆಗಳು

ಕಳವು ಪ್ರಕರಣ

                ದಿನಾಂಕ: 24-01-2022 ರಿಂದ 29-01-2022 ರ ನಡುವಿನ ದಿನಗಳಲ್ಲಿ ಕುಶಾಲನಗರದ ಬಸವೇಶ್ವರ ಬಡಾವಣೆ ನಿವಾಸಿ ಸಂಪತ್ ಎಂಬುವವರ ಮನೆಯ ಬಾಗಿಲಿನ ಲಾಕ್‍ ಅನ್ನು ಯಾರೋ ಕಳ್ಳರು ಮುರಿದು ಒಳನುಗ್ಗಿ ಮನೆಯೊಳಗೆ ಬೀರುವಿನಲ್ಲಿ ಇಟ್ಟಿದ್ದ ₹. 50,000 ನಗದು ಮತ್ತು ₹. 1,32,000 ಮೌಲ್ಯದ ಚಿನ್ನಾಭರಣ ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ದೇವಾಲಯದ ಹುಂಡಿ ಹಣ ಕಳವು ಪ್ರಕರಣ

                ದಿನಾಂಕ: 29-01-2022 ರಂದು ರಾತ್ರಿ ಸೋಮವಾರಪೇಟೆ ತಾಲ್ಲೂಕು ಚೌಡ್ಲು ಗ್ರಾಮದ ಶ್ರೀ ನಂಜುಂಡೇಶ್ವರ ದೇವಾಲಯದ ಬೀಗವನ್ನು ಯಾರೋ ಕಳ್ಳರು ಒಡೆದು ದೇವಸ್ಥಾನದ ಒಳಗೆ ಇಟ್ಟಿದ್ದ ಕಾಣಿಕೆ ಹುಂಡಿಯನ್ನು ಒಡೆದು ಅಂದಾಜು 8 ರಿಂ 10 ಸಾವಿರ ರೂ ನಗದು ಹಣವನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ದೇವಾಲಯ ಸಮಿತಿಯವರು ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ದೇವಾಲಯದ ಹುಂಡಿ ಹಣ ಕಳವು ಪ್ರಕರಣ

                ದಿನಾಂಕ: 29-01-2022 ರಂದು ರಾತ್ರಿ ಸೋಮವಾರಪೇಟೆ ಪಟ್ಟಣದ ಶ್ರೀ ಸೋಮೇಶ್ವರ ದೇವಾಲಯದ ಮೇಲ್ಚಾವಣಿ ಹಂಚನ್ನು ಯಾರೋ ಕಳ್ಳರು ತೆಗೆದು ಒಳನುಗ್ಗಿ ದೇವಸ್ಥಾನದ ಒಳಗೆ ಇಟ್ಟಿದ್ದ ಕಾಣಿಕೆ ಹುಂಡಿಯನ್ನು ಒಡೆದು ಅಂದಾಜು 5 ರಿಂ 6 ಸಾವಿರ ರೂ ನಗದು ಹಣವನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ದೇವಾಲಯ ಸಮಿತಿಯವರು ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಅಕ್ರಮ ಮದ್ಯ ಮಾರಾಟ ಪ್ರಕರಣ

                ದಿನಾಂಕ: 30-01-2022 ರಂದು ವಿರಾಜಪೇಟೆ ತಾಲ್ಲೂಕು ಕೆದಮುಳ್ಳೂರು ಗ್ರಾಮದ ನಿವಾಸಿ  ಫರ್ನಾಂಡಿಸ್ ಎಂಬುವವರು ಕದನೂರು ಗ್ರಾಮದ ಬಸ್‍ ತಂಗುದಾಣದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ  ಮದ್ಯವನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಮಾಡುತ್ತಿದ್ದ ಪ್ರಕರಣವನ್ನು ವಿರಾಜಪೇಟೆ ಗ್ರಾಮಾಂತರ  ಠಾಣೆ ಪಿಎಸ್‌ಐ ಸಿದ್ದಲಿಂಗ ಬಾನಸೆ ಮತ್ತು ಸಿಬ್ಬಂದಿಯವರು  ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ಕಾಫಿ ಕಳವು ಪ್ರಕರಣ

                 ದಿನಾಂಕ 29-01-2022 ರಂದು ವಿರಾಜಪೇಟೆ ತಾಲ್ಲೂಕು ಕೊಟ್ಟೋಳಿ ನಿವಾಸಿ ಕುಟ್ಟಪ್ಪ ಎಂಬುವವರು ಅವರ ಕಾಫಿ ತೋಟದಿಂದ ಕುಯ್ದ ಕಾಫಿಯನ್ನು ಟಾರ್ಪಾಲ್‍ನ ಮೇಲೆ ಒಣಗಳು ಹಾಕಿದ್ದಾಗ ಯಾರೋ ಕಳ್ಳರು ಅಂದಾಜು ₹. 48,000 ಮೌಲ್ಯದ 600 ಕೆಜಿ ಯಷ್ಟು ಕಾಫಿಯನ್ನು ₹. 8,000 ಮೌಲ್ಯದ 2 ಟಾರ್ಪಾಲ್‍ ಸಮೇತ ಕಳವು ಮಾಡುಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಇತ್ತೀಚಿನ ನವೀಕರಣ​ : 31-01-2022 04:51 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080