ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 29-03-2022 ರಂದು ಕುಶಾಲನಗರ ತಾಲ್ಲೂಕು ಕೂಡಿಗೆ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-ಯು-4572 ರ ಬೈಕನ್ನು ಸವಾರ ಸುಭಾಶ್‍ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೆಂಕಟೇಶ್‍ ಎಂಬುವವರಿಗೆ ಡಿಕ್ಕಿಪಡಿಸಿದ ಪರಿಣಾಮ ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ರಸ್ತೆ ಅಪಘಾತ ಪ್ರಕರಣ

            ದಿನಾಂಕ: 27-03-2022 ರಂದು ಕುಶಾಲನಗರ ತಾಲ್ಲೂಕು ಕೊಡಗರಹಳ್ಳಿ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-51-ಎಂಸಿ-8470 ರ ಕಾರನ್ನು ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-45-ಇಸಿ-6922 ರ ಬೈಕ್‍ ಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್‍ ಸವಾರ ಅವಿನಾಶ್‍ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ದಿನಾಂಕ 30.03.2022 ರಂದು ನೀಡಿದ ಪುಕಾರಿನ ಮೇರೆ ಸುಂಟಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಕಳವು ಪ್ರಕರಣ

            ದಿನಾಂಕ: 28-03-2022 ರಂದು ವಿರಾಜಪೇಟೆ ಪಟ್ಟಣದ ಶ್ರೀ ಕೃಷ್ಣ ಲಾಡ್ಜ್ ನಲ್ಲಿ ಕೆನರಾ ಬ್ಯಾಂಕ್‍ ಉದ್ಯೋಗಿ ಸುಮಿತ್ ಗ್ಯಾಬ್ರಿಯಲ್‍ ಎಂಬುವವರು ತಂಗಿದ್ದು ಸಂದರ್ಭ ಸ್ನಾನ ಮಾಡುವಾಗ ಚಿನ್ನದ ಉಂಗುರವನ್ನು ಮರೆತು ಬೆಳಿಗ್ಗೆ ಕೆಲಸದ ನಿಮಿತ್ತ ಅರಪಟ್ಟು ಕೆನರಾ ಬ್ಯಾಂಕ್‍ ಗೆ ಹೋಗಿ ವಾಪಸ್ಸು ಬಂದಾಗ ಲಾಡ್ಜ್‍ ಮೇನೇಜರ್‍ ಬೇರೊಂದು ರೂನ ನೀಡಿರುತ್ತಾರೆ. ನಂತರ ಉಂಗುರದ ನೆನಪಾಗಿ ಮೊದಲಿದ್ದ ಕೊಠಡಿಗೆ ಹೋಗಿ ನೋಡಿದಾಗ ಬೆಳಿಗ್ಗೆ ಬಿಚ್ಚಿಟ್ಟಿದ್ದ ₹. 22,000 ಮೌಲ್ಯದ ಚಿನ್ನದ ಉಂಗುರವನ್ನು ಯಾರೋ ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ರಸ್ತೆ ಅಪಘಾತ ಪ್ರಕರಣ

            ದಿನಾಂಕ: 30.03.2022 ರಂದು ಸೋಮವಾರಪೇಟೆ ತಾಲ್ಲೂಕು ಯಡೂರು ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-ಬಿ-1771 ರ ಆಟೋ ರಿಕ್ಷಾವನ್ನು ಚಾಲಕ ಮಹಮದ್ ಶಫಿ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ    ಕೆಎ-12-ಇ-6709 ರ ಬೈಕ್‍ ಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್‍ ಸವಾರ ನಂದೀಶ್‍ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪ್ರಕರಣ
            ದಿನಾಂಕ: 29-03-2022 ರಂದು ಸೋಮವಾರಪೇಟೆ ತಾಲ್ಲೂಕು ಭೂ ಮಾಪನ ಕಛೇರಿಯ ಭೂಮಾಪಕರಾದ ಸೂರ್ಯಪ್ರಕಾಶ್‍ ಎಂಬುವವರು ತಲ್ತಾರೆ ಶೆಟ್ಟಳ್ಳಿ ಗ್ರಾಮದ ಮಂಜುನಾಥ್‍ ಎಂಬುವವರು ಸಲ್ಲಿಸಿದ್ದ ಅರ್ಜಿಯ ಮೇರೆ ಭೂ ಮಾಪನ ಮಾಡಲು ಕಛೇರಿ ಸಹಾಕರೊಂದಿಗೆ ಹೋಗಿದ್ದಾಗ ಮಂಜುನಾಥ್‍ ರವರು ಅವರು ಹೇಳಿದಂತೆ ಅಳತೆ ಮಾಡಬೇಕು ಎಂದು ಹೇಳಿ ಭೂ ಮಾಪನ ಮಾಡಲು ಬಿಡದೆ ಅವಾಚ್ಯ ಪದಗಳಿಮದ ಬೈದು ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 31-03-2022 06:59 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080