ಅಭಿಪ್ರಾಯ / ಸಲಹೆಗಳು

ಹಲ್ಲೆ ಪ್ರಕರಣ

            ದಿನಾಂಕ: 29-08-2021 ರಂದು ಮಡಿಕೇರಿ ತಾಲ್ಲೂಕು ಅಯ್ಯಂಗೇರಿ ನಿವಾಸಿ ಚಿಂಗಡ ಶಿವಾಜಿ ಎಂಬುವವರಿಗೆ ಅದೇ ಗ್ರಾಮದ ನಿವಾಸಿಗಳಾದ ಶಿವಕುಮಾರ್‌ ಮತ್ತು ಸುಭಾಷ್‌ ಎಂಬುವವರು ವಿನಾ ಕಾರಣ ಜಗಳ ಮಾಡಿ ಹಲ್ಲೆ ಮಾಡಿ ಗಾಯಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಭಾಗಮಂಡಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ರಸ್ತೆ ಅಪಘಾತ ಪ್ರಕರಣ

            ದಿನಾಂಕ: 29-08-2021 ರಂದು ಕುಶಾಲನಗರ ತಾಲ್ಲೂಕು ಬಸವನಹಳ್ಳಿ ಗ್ರಾಮದ ಬಳಿ ಕೆಎ-09-ಎಂಎ-1510  ನೋಂದಣಿ ಸಂಖ್ಯೆಯ ಕಾರನ್ನು ಅದರ ಚಾಲಕ ರಕ್ಷಿತ್‌ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿಪಡಿಸಿದ ಪರಿಣಾಮ ಕಾರು ಚಾಲಕ ಗಾಯಗೊಂಡಿದ್ದು ಈ ಬಗ್ಗೆ ಲಾರಿ ಚಾಲಕ ಅಖಿಲ್‌ ಎಂಬುವವರು ನೀಡಿದ ದೂರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ರಸ್ತೆ ಅಪಘಾತ, ಮಹಿಳೆ ಸಾವು ಪ್ರಕರಣ

            ದಿನಾಂಕ: 30-08-2021 ರಂದು ಸುಂಟಿಕೊಪ್ಪ ಗ್ರಾಮದ ಗದ್ದೆಹಳ್ಳ ವಂದನ ಬಾರ್‌ ಬಳಿ ಹೆದ್ದಾರಿ ರಸ್ತೆಯಲ್ಲಿ ಟಿಎನ್‌-70-ಎ-7461 ರ ಲಾರಿಯನ್ನು ಅದರ ಚಾಲಕ ಶಿವಶಕ್ತಿ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ಲಾರಿ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮಗುಚಿ ಬೀಳುವಾಗ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ ಮೇಲೆ ಬಿದ್ದುದರಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸುಂಟಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಬೈಕ್‌ ಕಳವು ಪ್ರಕರಣ ಪತ್ತೆ.

            ದಿನಾಂಕ: 30-08-2021 ರಂದು ಕುಶಾಲನಗರ ಗ್ರಾಮಾಂತರ ಠಾಣೆ ಪಿಎಸ್‌ಐ ಶಿವಶಂಕರ್‌ ಮತ್ತು ಸಿಬ್ಬಂದಿಯವರು ಠಾಣಾ ವ್ಯಾಪ್ತಿಯ ಸುಂದರ ನಗರ ಬಳಿ ಬೆಂಗಳೂರಿನಿಂದ ಕಳವು ಮಾಡಿಕೊಂಡು ಬಂದಿದ್ದ ಕೆಎಲ್-21-ವಿ-4485 ನೋಂದಣಿ ಸಂಖ್ಯೆಯ ಬೈಕೊಂದನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಕೇರಳ ರಾ ರಾಜ್ಯದ ವೈನಾಡ್‌ ಮೂಲದ ಪ್ರಸ್ತುತು ಬೆಂಗಳೂರು ನಗರದ ಬಿಟಿಎಂಲೇಔಟ್‌ ನಿವಾಸಿ ರಿಂಟು ಪಿ.ಎಂ ಎಂಬುವವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

 ಅಕ್ರಮ ಗಾಂಜಾ ಬೆಳೆ ಪ್ರಕರಣ.

            ದಿನಾಂಕ: 30-08-2021 ರಂದು ವಿರಾಜಪೇಟೆ ತಾಲ್ಲೂಕು ಆರ್ಜಿ ಗ್ರಾಮದ ನಿವಾಸಿ ತಬ್ಬರಿಸ್‌ ಅಹಮ್ಮದ್‌ ಮತ್ತು ತಂಗಚ್ಚನ್‌ ಎಂಬುವವರು ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಪ್ರಕರಣವನ್ನು ವಿರಾಜಪೇಟೆ ವೃತ್ತ ಸಿ.ಪಿ.ಐ ‍ಶ್ರೀಧರ್‌ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಬೈಕ್‌ ಅಪಘಾತ, ಯುವ ಸಾವು.

            ದಿನಾಂಕ: 29-08-2021 ರಂದು ರಾತ್ರಿ ವಿರಾಜಪೇಟೆ ತಾಲ್ಲೂಕು ಬಿಟ್ಟಂಗಾಲ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-ಕ್ಯೂ-3031 ರ ಬೈಕನ್ನು ಅದರ ಸವಾರ ಗೌಡಜ್ಜ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ಬದಿಯ ಸಿಗ್ನಲ್‌ ಕಂಬಕ್ಕೆ ಡಿಕ್ಕಿಯಾಗಿ ಸವಾಋ ಬಿದ್ದು ತಲೆಗೆ ಗಾಯವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದು ಈ ಬಗ್ಗೆ ನೀಡಿದ ದೂರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 31-08-2021 05:34 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ