ಅಭಿಪ್ರಾಯ / ಸಲಹೆಗಳು

ವನ್ಯಪ್ರಾಣಿ ಮಾಂಸ ಮಾರಾಟ ಪ್ರಕರಣ, ಆರೋಪಿ ಬಂಧನ.

ಕೊಡಗು ಜಿಲ್ಲೆ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಕೊಳಕೇರಿ ಗ್ರಾಮದಲ್ಲಿ ಕಾಡುಕೋಣದ ಮಾಂಸ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಮಾಲು ಸಮೇತ ಪತ್ತೆಹಚ್ಚುವಲ್ಲಿ ಜಿಲ್ಲಾ ಡಿಸಿಐಬಿ ವಿಭಾಗದ ಪೊಲೀಸರು ಯಶಸ್ವಿಯಾಗಿದ್ದಾರೆ.

ದಿನಾಂಕ 10-02-2021 ರಂದು ನಾಪೋಕ್ಲು ಠಾಣಾ ವ್ಯಾಪ್ತಿಯಲ್ಲಿ ಕಾಡುಪ್ರಾಣಿಗಳ ಮಾಂಸ ಮಾರಾಟ ಮಾಡುತ್ತಿರುವ ಜಾಲದ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆ ಅಕ್ರಮವಾಗಿ ಕಾಡುಕೋಣ ಮಾಂಸ ಮಾರಾಟ ಮಾಡಲು ತಯಾರಿ ಮಾಡುತ್ತಿದ್ದ ಅಶ್ರಫ್ ತಂದೆ ಲೇಟ್ ಅಬ್ದುಲ್ ಖಾದರ್, ಪ್ರಾಯ್: 41 ವರ್ಷ, ವ್ಯಾಪಾರ ವೃತ್ತಿ, ಕೊಳಕೇರಿ ಗ್ರಾಮ, ಎಂಬುವವರನ್ನು ವಶಕ್ಕೆ ಪಡೆದು ಆರೋಪಿ ವಶದಲ್ಲಿದ್ದ 22 ಕೆ.ಜಿ 600 ಗ್ರಾಂ ತೂಕದ ಕಾಡುಕೋಣದ ಮಾಂಸವನ್ನು ಅಮಾನತ್ತುಪಡಿಸಿಕೊಂಡು ಪ್ರಕರಣ ದಾಖಲಿಸಿರುತ್ತಾರೆ.ಪ್ರಕರಣದ ಪ್ರಮುಖ ಆರೋಪಿಗಳಾದ್ ಅಬ್ದುಲ್ಲಾ, ಯಾಕೂಬ್ ಮತ್ತು ಮಹಮ್ಮದ್ @ ಮಮ್ಮು ಎಂಬುವವರು ತಲೆಮರೆಸಿಕೊಂಡಿರುತ್ತಾರೆ.

ಈ ಪ್ರಕರಣವನ್ನು ಡಿಸಿಐಬಿ ಪೊಲೀಸ್ ನಿರೀಕ್ಷಕರಾದ ಎನ್.ಕುಮಾರ್ ಆರಾದ್ಯ, ಸಿಬ್ಬಂದಿಗಳಾದ ಎ.ಎಸ್.ಐ ಹಮೀದ್, ಯೋಗೇಶ್ ಕುಮಾರ್, ನಿರಂಜನ್, ವಸಂತ, ಶರತ್ ರೈ, ವೆಂಕಟೇಶ್, ಸುರೇಶ್, ಶಶಿಕುಮಾರ್ ರವರು ಪತ್ತೆ ಮಾಡಿದ್ದು, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯವನ್ನು ಶ್ಲಾಘಿಸಲಾಗಿದೆ.

ಇತ್ತೀಚಿನ ನವೀಕರಣ​ : 11-02-2021 01:35 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ