ಅಭಿಪ್ರಾಯ / ಸಲಹೆಗಳು

ಕೊಲೆ ಪ್ರಕರಣ

                ಪತ್ನಿಯ ಮೇಲಿನ ವೈಷಮ್ಯದಿಂದ ವ್ಯಕ್ತಿಯೊಬ್ಬ ಮನೆಯ ಮೇಲ್ಛಾವಣಿಯಿಂದ ಪೆಟ್ರೋಲ್‍ ಸುರಿದು ಬೆಂಕಿ ಹಚ್ಚಿ 6 ಜನ ಅಮಾಯಕರ ಸಾವಿಗೆ ಕಾರಣನಾಗಿರುವ ಧಾರುಣ ಘಟನೆ ನಡೆದಿದೆ.

                ಪೊನ್ನಂಪೇಟೆ ತಾಲ್ಲೂಕು ಮುಗುಟಗೇರಿ ಗ್ರಾಮದ ಕೋಲೇರ ಚೆಟ್ಟಿಯಪ್ಪ ಎಂಬುವವರ ಲೈನ್‍ ಮನೆಯಲ್ಲಿ ಮಂಜು ಎಂಬುವವರು ಪತ್ನಿ ಹಾಗೂ ಮಗುವಿನೊಂದಿಗೆ ವಾಸವಿದ್ದರು. ಮಾವ ಬೋಜ ಮತ್ತು ಅತ್ತೆ ಬೇಬಿ ರವರು ವೈಯಕ್ತಿಕ ಕಾರಣದಿಂದ ಬೇರೆ ವಾಸವಿದ್ದರು. ದಿನಾಂಕ: 02-04-2021 ರಂದು ಅವರ ಮನೆಗೆ ಅತ್ತೆ ಬೇಬಿ, ಸಂಬಂದಿಕರಾದ ತೋಲ ಮತ್ತು ಅವರ ಕುಟುಂಬಸ್ಥರು ಬಂದಿದ್ದರು. ದಿನಾಂಕ: 02-04-2020 ರಂದು ರಾತ್ರಿ ಎಲ್ಲರೂ ಮನೆಯಲ್ಲಿ ಬೇರೆ ಬೇರೆ ಕೋಣೆಗಳಲ್ಲಿ ಮಲಗಿರುವಾಗ ಇದನ್ನು ತಿಳಿದಿದ್ದ ಮಾವ ಬೋಜ ರವರು ಎಲ್ಲರೂ ಮಲಗಿದ್ದ ಮನೆಯ ಬಾಗಿಲುಗಳಿಗೆ ಬೀಗ ಹಾಕಿ ಮೇಲ್ಚಾವಣಿ ಹಂಚನ್ನು ತೆಗೆದು ತನ್ನ ಪತ್ನಿಯನ್ನು ಕೊಲ್ಲುವ ಉದ್ದೇಶದಿಂದ ಬೇಬಿ ಮತ್ತು ಮಕ್ಕಳು ಮಲಗಿದ್ದಲ್ಲಿಗೆ ಪೆಟ್ರೋಲ್‍ ಸುರಿದು ಬೆಂಕಿ ಹಚ್ಚಿದ್ದು ಇದರಿಂದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದು ಮತ್ತು ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಪೊನ್ನಂಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಲಾಟರಿ ಮಾರಾಟ ಪ್ರಕರಣ

                ದಿನಾಂಕ: 02-04-2021 ರಂದು ಪೊನ್ನಂಪೇಟೆ ತಾಲ್ಲೂಕು ಟಿ.ಶೆಟ್ಟಿಗೇರಿ ಗ್ರಾಮದ ಬಳಿ ಸಾರ್ವಜನಿಕ ಸ್ಥಳದಲ್ಲಿ ನಾಥಂಗಾಲ ಗ್ರಾಮದ ನಿವಾಸಿ ಟಿ.ಡಿ ಪ್ರದೀಪ್‍ ಎಂಬುವವರು ಅಕ್ರಮ ವಾಗಿ ಕೇರಳ ರಾಜ್ಯದ ಲಾಟರಿ ಟಿಕೇಟುಗಳನ್ನು ಸಾರ್ವಜನಿರಿಗೆ ಮಾರಾಟ ಮಾಡುತ್ತಿದ್ದ ಪ್ರಕರಣ ವನ್ನು ಶ್ರೀಮಂಗಲ ಠಾಣೆ ಪಿಎಸ್‍ಐ ರವಿಶಂಕರ್‍ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

                ದಿನಾಂಕ: 02-04-2021 ರಂದು ಸೋಂವಾರಪೇಟೆ ತಾಲ್ಲೂಕು ನೆಲ್ಯಹುದಿಕೇರಿ ಗ್ರಾಮದ ನಿವಾಸಿ ಸಾಬು ವರ್ಗೀಸ್‍ ಎಂಬುವವರು ಹೋಟೇಲ್‍ ನಲ್ಲಿ ಊಟ ಮಾಡಿ ಹೋಗುತ್ತಿರುವಾಗ ಬೆಟ್ಟದಕಾಡು ನಿವಾಸಿ ಚಂದ್ರು ಎಂಬುವವರು ವೈಯಕ್ತಿಕ ವಿಚಾರದಲ್ಲಿ ವೈಷಮ್ಯದಿಂದ ದಾರಿ ತಡೆದು ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸಿದ್ದಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 04-04-2021 06:23 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ