ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ

ದಿನಾಂಕ 06/11/2021ರಂದು ವಿರಾಜಪೇಟೆ ಬಳಿಯ ಪಾಲಂಗಾಲ ನಿವಾಸಿ ಇಂದಿರಾ ಚಂಗಪ್ಪ ಎಂಬವರು ಅವರ ಕುಟುಂಬದೊಂದಿಗೆ ಕಾರಿನಲ್ಲಿ ಮಂಗಳೂರಿಗೆ ಹೋಗುತ್ತಿರುವಾಗ ಮೂರ್ನಾಡಿನ ದೀರ್ಘಕೇಶಿ ಪೆಟ್ರೋಲ್‌ ಬಂಕಿನಲ್ಲಿ ಕಾರಿಗೆ ಪೆಟ್ರೋಲ್‌ ಹಾಕಿಸುತ್ತಿರುವಾಗ ಕಾರಿನ ಹಿಂದೆ ನಿಲ್ಲಿಸಿದ್ದ ಒಂದು ಖಾಸಗಿ ಬಸ್ಸನ್ನು ಅದರ ಚಾಲಕ ದಿಲೀಪ್‌ ಎಂಬವರು ಅಜಾಗರೂಕತೆಯಿಂದ ಬಸ್ಸನ್ನು ಹಿಂದಕ್ಕೆ ಚಾಲಿಸಿದ ಪರಿಣಾಮ ಬಸ್ಸು ಕಾರಿನ ಹಿಂಭಾಗಕ್ಕೆ ಡಿಕ್ಕಿಯಾಗಿ ಕಾರಿಗೆ ಹಾನಿಯುಂಟಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಮಡಿಕೇರಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ರಸ್ತೆ ಅಪಘಾತ

ದಿನಾಂಕ 06/11/2021ರಂದು ಕುಶಾಲನಗರದ ಬಾಪೂಜಿ ಬಡಾವಣೆ ನಿವಾಸಿ ರೋಹಿತ್‌ ಎಂಬವರು ಅವರ ಕಾರಿನಲ್ಲಿ ರಕ್ಷಿತ್‌ ಎಂಬವರೊಂದಿಗೆ ಮಂಗಳೂರಿಗೆ ಹೋಗುತ್ತಿರುವಾಗ ಮಡಿಕೇರಿ ಬಳಿಯ ಮದೆನಾಡು ಗ್ರಾಮದ ಬಳಿ ಎದುರಿನಿಂದ ಒಂದು ಕಾರನ್ನು ಅದರ ಚಾಲಕ ಮೈಸೂರಿನ ಟಿ.ನರಸೀಪುರ ನಿವಾಸಿ ಶಿವಕುಮಾರ್‌ ಎಂಬವರು ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಾಲಿಸಿಕೊಂಡು ಬಂದು ರೋಹಿತ್‌ರವರ ಕಾರಿನ ಮುಂದೆ ಹೋಗುತ್ತಿದ್ದ ಕಾರಿಗೆ ಡಿಕ್ಕಿಪಡಿಸಿ ನಂತರ ರೋಹಿತ್‌ರವರ ಕಾರಿಗೂ ಡಿಕ್ಕಿಪಡಿಸಿದ ಪರಿಣಾಮ ರೋಹಿತ್‌ ಹಾಗೂ ರಕ್ಷಿತ್‌ರವರಿಗೆ ಗಾಯಗಳಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಮಡಿಕೇರಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಕಳವು ಪ್ರಕರಣ

ವಿರಾಜಪೇಟೆ ಬಳಿಯ ಅಮ್ಮತ್ತಿ ಪಟ್ಟಣದಲ್ಲಿನ ರಂಜಿತ್‌ ಎಂಬವರ ಅಂಗಡಿ ಹೋಟೆಲಿಗೆ ದಿನಾಂಕ 05/11/2021 ರಿಂದ 06/11/2021ರ ರಾತ್ರಿ ವೇಳೆ ಯಾರೋ ಕಳ್ಳರು ಹೋಟೆಲಿನ ಬಾಗಿಲ ಬೀಗ ಮುರಿದು ಒಳ ಪ್ರವೇಶಿಸಿ ಅಂಗಡಿಯೊಳಗಿದ್ದ ಸುಮಾರು ರೂ. 13,000/- ಮೌಲ್ಯದ ನಗದು ಹಾಗೂ ಸಿಗರೇಟನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ನೀಡಿದ ದೂರಿನ ಮೇರೆಗೆ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 07-11-2021 11:26 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080