ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ

ದಿನಾಂಕ 09/05/2022ರ ರಾತ್ರಿ ವೇಳೆ ಮಡಿಕೇರಿಯ ಗೋಸ್ಟಾಪ್ಸ್‌ ರೆಸಾರ್ಟಿನಲ್ಲಿ ಕೆಲಸ ಮಾಡುತ್ತಿರುವ ಅನಿಲ್‌ ಮುಂಡಾ ಎಂಬವರು ಬೈಕಿನಲ್ಲಿ ಅವರ ಜೊತೆ ಸಾಜನ್‌ ಮಿನ್ಸ್‌ ಎಂಬವರನ್ನು ಕರೆದುಕೊಂಡು ಹೋಗುತ್ತಿರುವಾಗ ನಗರದ ಕಾಮಧೇನು ಪೆಟ್ರೋಲ್‌ ಬಂಕ್‌ ಬಳಿ ಅನಿಲ್‌ಮುಂಡಾರವರು ಬೈಕನ್ನು ಅಜಾಗರೂಕತೆಯಿಂದ ಚಾಲಿಸಿದ ಪರಿಣಾಮ ಬೈಕ್‌ ಹತೋಟಿ ತಪ್ಪಿ ರಸ್ತೆಯಲ್ಲಿ ಬಿದ್ದು ಹಿಂಬದಿ ಸವಾರ ಸಾಜನ್‌ ಮಿನ್ಸ್‌ರವರಿಗೆ ಗಾಯಗಳಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಮಡಿಕೇರಿ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ರಸ್ತೆ ಅಪಘಾತ

ದಿನಾಂಕ 09/05/2022ರಂದು ಕಡಂಗ ನಿವಾಸಿ ಶಫೀಕ್‌ ಬಿ.ಕೆ. ಎಂಬವರ ಪತ್ನಿ ಶಬೀನಾ ಬಾನು ಮತ್ತು ಮಕ್ಕಳು ಕುಶಾಲನಗರದ ಮಾರುಕಟ್ಟೆ ರಸ್ತೆಯಲ್ಲಿರುವ ವಿ.ಎಂ.ಗೋಡಾನ್‌ ಅಂಗಡಿಯ ಬಳಿ ರಸ್ತೆ ದಾಟುತ್ತಿರುವಾಗ ಮಾರುಕಟ್ಟೆ ಕಡೆಯಿಂದ ಒಂದು ಸ್ಕೂಟರನ್ನು ಅದರ ಚಾಲಕ ಮನೋಜ್‌ ಎಂಬಾತ ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಾಲಿಸಿಕೊಂಡು ಬಂದು ರಸ್ತೆ ದಾಟುತ್ತಿದ್ದ ಶಫೀಕ್‌ರವರ ಮಗ ಶಾಜಿಲ್‌ ರವರಿಗೆ ಡಿಕ್ಕಿಪಡಿಸಿದ ಪರಿಣಾಮ ಶಾಜಿಲ್‌ರವರಿಗೆ ಗಾಯಗಳಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಕುಶಾಲನಗರ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

 

ರಸ್ತೆ ಅಪಘಾತ

ದಿನಾಂಕ 09/05/2022ರಂದು ಸುಂಟಿಕೊಪ್ಪ ಬಳಿಯ 7ನೇ ಹೊಸಕೋಟೆ ನಿವಾಸಿ ಹುಸೈನ್‌ ಎಂಬವರು ಅವರ ಬೈಕಿನಲ್ಲಿ ಹಾಕತ್ತೂರಿಗೆ ಹೋಗುತ್ತಿರುವಾಗ 7ನೇ ಹೊಸಕೋಟೆಯ ಮಾರುತಿ ನಗರದ ಬಳಿ ಅವರ ಮುಂದೆ ಬೈಕಿನಲ್ಲಿ ಹೋಗುತ್ತಿದ್ದ ರಾಶಿದ್‌ ಎಂಬವರಿಗೆ ಎದುರಿನಿಂದ ಒಂದು ಬೊಲೆರೋ ಪಿಕ್‌ಅಪ್‌ ವಾಹನವನ್ನು ಅದರ ಚಾಲಕ ಸೋಮು ಬಿ.ಎಸ್.‌ ಎಂಬವರು ಬೊಲೆರೋ ವಾಹನವನ್ನು ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಾಲಿಸಿಕೊಂಡು ಬಂದು ಡಿಕ್ಕಿಪಡಿಸಿದ ಪರಿಣಾಮ ರಾಶಿದ್ ರವರಿಗೆ ಗಾಯಗಳಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಸುಂಟಿಕೊಪ್ಪ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 10-05-2022 04:38 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080