ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ

ದಿನಾಂಕ 09/10/2021ರಂದು ಕುಶಾಲನಗರದ ಗುಮ್ಮನಕೊಲ್ಲಿ ನಿವಾಸಿ ವಿನು ಎಂಬವರು ಅವರ ಕೂಡ್ಲೂರಿನ ಅಂಗಡಿಯೊಂದರಲ್ಲಿರುವಾಗ ಕುಶಾಲನಗರದ ಕಡೆಯಿಂದ ಕೂಡಿಗೆ ಕಡೆಗೆ ಪ್ರಜ್ವಲ್‌ ಎಂಬವರು ಒಂದು ಸ್ಕೂಟರನ್ನು ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಾಲಿಸಿಕೊಂಡು ಬಂದು ಕೂಡಿಗೆಯ ಕಡೆಯಿಂದ ಬರುತ್ತಿದ್ದ ಮಾರುತಿ ಓಮಿನಿ ವ್ಯಾನೊಂದಕ್ಕೆ ಡಿಕ್ಕಿಪಡಿಸಿದ ಪರಿಣಾಮ ಸ್ಕೂಟರ್‌ ಚಾಲಿಸುತ್ತಿದ್ದ ವಿನು ಹಾಗೂ ಹಿಂಬದಿ ಸವಾರರು ಸೇರಿದಂತೆ ಇಬ್ಬರೂ ಕೆಳಗೆ ಬಿದ್ದು ಗಾಯಗಳಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಕುಶಾಲನಗರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಹಲ್ಲೆ ಪ್ರಕರಣ

ದಿನಾಂಕ 09/10/2021ರಂದು ವಿರಾಜಪೇಟೆಯ ಹೆಗ್ಗಳ ನಿವಾಸಿ ಬೇಬಿ ಎಂಬವರು ಅವರ ಸ್ನೇಹಿತರಾದ ಬಾಬು ಹಾಗೂ ಫ್ರಾನ್ಸಿಸ್‌ ಎಂಬವರೊಂದಿಗೆ ಮಡಿಕೇರಿ ಮಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ನಡೆದುಕೊಂಡು ಹೋಗುತ್ತಿರುವಾಗ ಬಸ್‌ ನಿಲ್ದಾಣದ ಬಳಿ ಓರ್ವ ರಿಕ್ಷಾ ಚಾಲಕ ವರ್ಗೀಸ್‌ ಎಂಬಾತನು ವಿನಾ ಕಾರಣ ಬಾಬುವರನ್ನು ತಡೆದು ಎಳೆದಾಡುತ್ತಿದ್ದುದನ್ನು ಬಿಡಿಸಲು ಹೋದ ಬೇಬಿರವರ ಮೇಲೆ ವರ್ಗೀಸ್‌ ಕಲ್ಲಿನಿಂದ ಹೊಡೆದು ಹಲ್ಲೆ ಮಾಡಿರುವುದಾಗಿ ದೂರು ನೀಡಿದ್ದು ಅದೇ ರೀತಿ ಬೇಬಿ, ಬಾಬು ಮತ್ತು ಫ್ರಾನ್ಸಿಸ್‌ರವರು ಸೇರಿಕೊಂಡು ವರ್ಗೀಸ್‌ರವರ ಮೇಲೆ ಹಲ್ಲೆ ಮಾಡಿರುವುದಾಗಿ ವರ್ಗೀಸ್‌ರವರು ಪ್ರತಿ ದೂರು ನೀಡಿದ್ದು  ಮಡಿಕೇರಿ ನಗರ ಪೊಲೀಸರು ಎರಡೂ ದೂರುಗಳನ್ನು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಮನುಷ್ಯ ಕಾಣೆ ಪ್ರಕರಣ

ನಂಜರಾಪಟ್ಟಣದ ನಿವಾಸಿ ಸತೀಶ ಎಂಬವರು ಮಡಿಕೇರಿ ಬಳಿಯ ಮೇಕೇರಿಯಲ್ಲಿರುವ ಅವರ ಅಕ್ಕನ ಮನೆಗೆ ಕೆಲಸದ ನಿಮಿತ್ತ ಹೋಗಿದ್ದು ದಿನಾಂಕ 08/10/2021ರಂದು ಅಕ್ಕನ ಮನೆಯಿಂದ ಹೋದವರು ಇದುವರೆಗೂ ಮರಳಿ ಬಾರದೆ ಕಾಣೆಯಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಮಡಿಕೇರಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಹಲ್ಲೆ ಪ್ರಕರಣ

ದಿನಾಂಕ 09/10/2021ರಂದು ಮಡಿಕೇರಿ ಬಳಿಯ ಎರಡನೇ ಮೊಣ್ಣಂಗೇರಿ ನಿವಾಸಿ ವಿಠಲ ನಾಯಕ ಎಂಬವರು ಅಂಗಡಿಗೆ ಹೋಗುತ್ತಿದ್ದಾಗ ದಾರಿಯಲ್ಲಿ ಪುರಂಧರ ನಾಯಕ ಎಂಬವರು ಬಂದು ಜಾಗದ ವಿಚಾರದಲ್ಲಿ ಜಗಳವಾಡಿ ಕೈಯಲ್ಲಿದ್ದ ಕತ್ತಿಯಿಂದ ವಿಠಲನಾಯಕರವರ ಮೇಲೆ ಕಡಿದು ಹಲ್ಲೆ ಮಾಡಿರುವುದಾಗಿ ನೀಡಿದ ದೂರಿನ ಮೇರೆಗೆ ಮಡಿಕೇರಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 10-10-2021 11:40 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080