ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ

ದಿನಾಂಕ 10/04/2021ರಂದು ಮಡಿಕೇರಿ ನಗರದ ದೇಚೂರಿನ ನಿವಾಸಿ ಸುಶೀಲಮ್ಮ ಎಂಬವರು ದೇಚೂರು ದೇವಸ್ಥಾನದ ಬಳಿ ನಡೆದುಕೊಂಡು ಹೋಗುವಾಗ ಒರ್ವ ಪಿಕ್‌ ಅಪ್‌ ವಾಹನದ ಚಾಲಕನು ಪಿಕ್‌ ಅಪ್‌ ಜೀಪನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲಿಸಿಕೊಂಡು ಬಂದು ಸುಶೀಲಮ್ಮನವರಿಗೆ ಡಿಕ್ಕಿಪಡಿಸಿದ ಪರಿಣಾಮ ಅವರಿಗೆ ಗಾಯಗಳಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಮಡಿಕೇರಿ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ರಸ್ತೆ ಅಪಘಾತ

ದಿನಾಂಕ 09/04/2021ರಂದು ಸುಂಟಿಕೊಪ್ಪ ಬಳಿಯ ಅತ್ತೂರು ನಲ್ಲೂರು ನಿವಾಸಿ ಹಮೀದ್‌ ಎಂಬವರು ಅವರ ಬೈಕಿನಲ್ಲಿ ಕುಶಾಲನಗರದಿಂದ ಬರುತ್ತಿರುವಾಗ ಸುಂಟಿಕೊಪ್ಪದ ಅಯ್ಯಪ್ಪ ದೇವಸ್ಥಾನದ ಬಳಿ ಅಬ್ದುಲ್‌ ಮಜೀದ್‌ ಎಂಬವರು ಅವರ ಕಾರನ್ನು ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಾಲಿಸಿಕೊಂಡು ಬಂದು ಹಮೀದ್‌ರವರಿಗೆ ಡಿಕ್ಕಿಪಡಿಸಿದ ಪರಿಣಾಮ ಹಮೀದ್‌ರವರಿಗೆ ಗಾಯಗಳಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ರಸ್ತೆ ಅಪಘಾತ

ದಿನಾಂಕ 10/04/2021ರಂದು ವಿರಾಜಪೇಟೆ ಬಳಿಯ ಕೊಟ್ಟೋಳಿ ನಿವಾಸಿ ಧನು ಎಂಬವರು ಅವರ ರಿಕ್ಷಾದಲ್ಲಿ ವಿರಾಜಪೇಟೆಯ ಚಿಕ್ಕಪೇಟೆ ಬಳಿ ಹೋಗುತ್ತಿರುವಾಗ ಎದುರಿನಿಂದ ಒಂದು ರಿಕ್ಷಾವನ್ನು ಅದರ ಚಾಲಕ ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಾಲಿಸಿಕೊಂಡು ಬಂದು ಧನುರವರ ರಿಕ್ಷಾಕ್ಕೆ ಡಿಕ್ಕಿಪಡಿಸಿ ನಿಲ್ಲಿಸದೇ ಹೋಗಿದ್ದು ಇದರ ಪರಿಣಾಮ ಧನುರವರ ರಿಕ್ಷಾಕ್ಕೆ ಹಾನಿಯುಂಟಾಗಿ ಧನನುರವರಿಗೆ ಗಾಯಗಳಾಗಿರುವುದಾಗಿ ನೀಡಿದ ದೂರಿನ ಮೇರೆಗ ವಿರಾಜಪೇಟೆ ನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಹಲ್ಲೆ ಪ್ರಕರಣ

ದಿನಾಂಕ 10/04/2021ರಂದು ಕೈಕೇರಿ ನಿವಾಸಿ ಪ್ರವೀಣ್‌ ಎಂಬವರು ಹಾತೂರು ಗ್ರಾಮದ ಅವರ ಮಾವನ ಮನೆಗೆ ಹೋಗಿದ್ದಾಗ ಅಲ್ಲಿ ಹಾತೂರು ನಿವಾಸಿಗಳಾದ ಉದಯ, ಚೋಟು ಮತ್ತು ಅಜಿತ್‌ ಎಂಬವರುಗಳು ಕ್ಷುಲ್ಲಕ ಕಾರಣಕ್ಕೆ ದೊಣ್ಣೆಯಿಂದ ಪ್ರವೀಣ್‌ರವರ ಮೇಲೆ ಹೊಡೆದು ಹಲ್ಲೆ ಮಾಡಿರುವುದಾಗಿ ನೀಡಿದ ದೂರಿನ ಮೇರೆಗೆ ಗೋಣಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 11-04-2021 11:42 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ