ಅಭಿಪ್ರಾಯ / ಸಲಹೆಗಳು

ಅಕ್ರಮ ಪ್ರವೇಶ, ಸಾಮಗ್ರಿ ನಾಶ

ಮಡಿಕೇರಿ ಸಮೀಪದ ಮೂರ್ನಾಡು ಬಳಿಯ ಹೊದ್ದೂರು ಗ್ರಾಮದ ಪಾಲೆ ಮಾಡು ಎಂಬಲ್ಲಿ ಕರ್ನಾಟಕ ಕ್ರಿಕೆಟ್‌ ಸಂಸ್ಥೆಯ ವತಿಯಿಂದ ಕ್ರಿಕೆಟ್‌ ಕ್ರೀಡಾಂಗಣದ ಕೆಲಸ ನಡೆಯುತ್ತಿದ್ದು ದಿನಾಂಕ 09/05/2022ರಂದು ರಾತ್ರಿ ವೇಳೆ ಕಾಮಗಾರಿ ನಡೆಯುತ್ತಿದ್ದ ಸ್ಥಳಕ್ಕೆ ಪಾಲೆಮಾಡು ನಿವಾಸಿಗಳಾದ  ಹೆಚ್‌.ಕೆ.ಮೊಣ್ಣಪ್ಪ ಮತ್ತು ಇತರೆ ಒಂಬತ್ತು ಜನರು ಅಕ್ರಮವಾಗಿ ಪ್ರವೇಶ ಮಾಡಿ ಅಲ್ಲಿ ನಿರ್ಮಿಸಿದ್ದ ತಾತ್ಕಾಲಿಕ ಶೆಡ್‌ ಅನ್ನು ಕಿತ್ತು ಹಾಕಿ ಅದರೊಳಗಿದ್ದ ಹಾರೆ, ಗುದ್ದಲಿ, ಪ್ಲಾಸ್ಟಿಕ್‌ ಕುರ್ಚಿಗಳನ್ನು ಸುಟ್ಟು ಹಾಕಿ ನಾಶಗೊಳಿಸಿರುವುದಾಗಿ ನೀಡಿದ ದೂರಿನ ಮೇರೆಗೆ ಮಡಿಕೇರಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಹಲ್ಲೆ ಪ್ರಕರಣ

ದಿನಾಂಕ 10/05/2022 ರಂದು ವಿರಾಜಪೇಟೆ ಬಳಿಯ ಹೆಗ್ಗಳ ನಿವಾಸಿ ಲಿಲ್ಲಿ ಎಂಬವರು ಮನೆಗೆ ಸಾಮಗ್ರಿ ತರಲು ಅಂಗಡಿಗೆ ಹೋಗುತ್ತಿರುವಾಗ ದಾರಿಯಲ್ಲಿ ಜಾರ್ಜ್‌ ಎಂಬವರು ಸಿಕ್ಕಿ ಹಳ ದ್ವೇಷದಿಂದ ಜಗಳವಾಡಿ ಕತ್ತಿಯಿಂದ ಲಿಲ್ಲಿಯವರ ಮೇಲೆ ಹಲ್ಲೆ ಮಾಡಿ ಗಾಯಗೊಳಿಸಿರುವದಾಗಿ ನೀಡಿದ ದೂರಿನ ಮೇರೆಗೆ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 11-05-2022 05:03 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080