ಅಭಿಪ್ರಾಯ / ಸಲಹೆಗಳು

ಹಲ್ಲೆ ಪ್ರಕರಣ

ದಿನಾಂಕ 10/03/2021 ರಂದು ಕುಟ್ಟ ಗ್ರಾಮದ ನಿವಾಸಿ ಜೇನು ಕುರುಬರ ರಾಜು ಎಂಬವರ ಮೇಲೆ ಅವರ ಪಕ್ಕದ ಮನೆಯ ನಿವಾಶಿ ಪಣಿ ಎರವರ ರಾಜು ಎಂಬವರು ಕ್ಷುಲ್ಲಕ ಕಾರಣಕ್ಕೆ ಜಗಳವಾಡಿ ದೊಣ್ಣೆಯಿಂದ ಜೇನು ಕುರುಬರ ರಾಜುರವರ ಮೇಲೆ ಹಲ್ಲೆ ಮಾಡಿ ಗಾಯಗೊಳಿಸಿರುವುದಾಗಿ ನೀಡಿದ ದೂರಿನ ಮೇರೆಗೆ ಕುಟ್ಟ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ರಸ್ತೆ ಅಪಘಾತ

ದಿನಾಂಕ 10/03/2021ರಂದು ಸುಳ್ಯ ತಾಲೂಕಿನ ದುಗ್ಗಲಡ್ಕ ಗ್ರಾಮದ ನಿವಾಸಿ ಮಹಮದ್‌ ರಫೀಕ್‌ ಎಂಬವರು ಪೆರಾಜೆಯ ಬಳಿ ಮುರ್ಷಾದ್‌, ಉಮ್ಮರ್‌ ಮತ್ತು ಸತೀಶ್‌ ಎಂಬವರೊಂದಿಗೆ ಮಾತನಾಡುತ್ತಾ ನಿಂತಿರುವಾಗ ಸುಳ್ಯ ಕಡೆಯಿಂದ ಒಂದು ಪಿಕ್‌ಅಪ್‌ ಜೀಪನ್ನು ಅದರ ಚಾಲಕ ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಾಲಿಸಿಕೊಂಡು ಬಂದು ರಸ್ತೆ ಬದಿಯಲ್ಲಿ ನಿಂತಿದ್ದ ಮಹಮದ್‌ ರಫೀಕ್‌ರವರ ಬೈಕಿಗೆ ಡಿಕ್ಕಿಪಡಿಸಿದ್ದು ಜೊತೆಯಲ್ಲೇ ಇದ್ದ ಮುರ್ಷಾದ್‌, ಸತೀಶ್‌ ಮತ್ತು ಉಮ್ಮರ್‌ರವರು ಸಹಾ ಕೆಳಗೆ ಬಿದ್ದು ಅವರುಗಳಿಗೆ ಗಾಯಗಳಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಮಡಿಕೇರಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ರಸ್ತೆ ಅಪಘಾತ

ದಿನಾಂಕ 09/03/2021ರಂದು ಕುಶಾಲನಗರ ಬಳಿಯ ಹೆಬ್ಬಾಲೆ ನಿವಾಸಿ ಪದ್ಮ ಎಂಬವರು ಹೆಬ್ಬಾಲೆಯ ಅಂಗಡಿಯಿಂದ ದಿನಸಿ ಸಾಮಗ್ರಿಗಳನ್ನು ಖರೀದಿಸಿ ಮನೆಗೆ ನಡೆದುಕೊಂಡು ಹೋಗುತ್ತಿರುವಾಗ ಹಿಂದಿನಿಂದ ಒಂದು ಮೋಟಾರು ಬೈಕನ್ನು ಅದರ ಚಾಲಕ ಹೆಬ್ಬಾಲೆಯ ಹರೀಶ್‌ ಎಂಬವರು ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಾಲಿಸಿಕೊಂಡು ಬಂದು ಪದ್ಮರವರಿಗೆ ಡಿಕ್ಕಿಪಡಿಸಿದ ಪರಿಣಾಮ ಪದ್ಮರವರಿಗೆ ಗಾಯಗಳಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಕುಶಾಲನಗರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 12-03-2021 03:46 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ