ಅಭಿಪ್ರಾಯ / ಸಲಹೆಗಳು

ಹಣ ವಂಚನೆ ಪ್ರಕರಣ

ಚೆಟ್ಟಳ್ಳಿ ಬಳಿಯ ಕೊಟ್ಟಿಗೇರಿ  ಎಸ್ಟೇಟ್‌ ನಿವಾಸಿ ಅಪ್ಪಚ್ಚು ಎಂಬವರ ಮೊಬೈಲಿಗೆ ದಿನಾಂಕ 10/03.2022ರಂದು ಅವರ ಎಸ್‌ಬಿಐ ಬ್ಯಾಂಕ್‌ ಖಾತೆ ನಿಷ್ಕ್ರಿಯಗೊಂಡಿದ್ದು ಸಕ್ರಿಯಗೊಳಿಸಲು ಕೆವೈಸಿ ನೀಡುವ ಬಗ್ಗೆ ಗ್ರಾಹಕ ಸೇವಾ ಕೇಂದ್ರಕ್ಕೆ ಕರೆ ಮಾಡುವಂತೆ ಬಂದ ಎಸ್‌ಎಂಎಸ್‌ ನೋಡಿ ಅಪ್ಪಚ್ಚುರವರು ಅದರಲ್ಲಿ ನೀಡಿದ್ದ ಮೊಬೈಲ್‌ ಸಂಖ್ಯೆಗೆ ಕರೆ ಮಾಡಿದಾಗ ಕರೆ ಸ್ವೀಕರಿಸಿದ ಅಪರಿಚಿತ ವ್ಯಕ್ತಿಗಳು ಕೆವೈಸಿ ಅಪ್‌ಡೇಟ್‌ ಮಾಡುವ ನೆಪದಲ್ಲಿ ಅಪ್ಪಚ್ಚುರವರ ಡೆಬಿಟ್‌ ಕಾರ್ಡ್ ಸಂಖ್ಯೆ ಮತ್ತು ಒಟಿಪಿಯನ್ನು ಪಡೆದುಕೊಂಡು ಅಪ್ಪಚ್ಚುರವರ ಖಾತೆಯಿಂದ ಸುಮಾಋ ರೂ. 1,10,896/- ರಷ್ಟು ಹಣವನ್ನು ವರ್ಗಾಯಿಸಿಕೊಂಡು ವಂಚಿಸಿರುವುದಾಗಿ ನೀಡಿದ ದೂರಿನ ಮೇರೆಗೆ ಮಡಿಕೇರಿಯ ಸಿಇಎನ್‌ ವಿಶೇಷ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಅಡುಗೆ ಅನಿಲ ಸಿಲಿಂಡರ್‌ ಕಳವು

ದಿನಾಂಕ 05/03/2022ರಿಂದ 07/03/2022ರ ನಡುವೆ ಕೊಡ್ಲಿಪೇಟೆ ಬಳಿಯ ಸರ್ಕಾರಿ ಪ್ರೌಢಶಾಲೆಯ ಬಿಸಿಯೂಟ ತಯಾರಿಸುವ ಅಡುಗೆ ಮನೆಗೆ ಯಾರೋ ಕಳ್ಳರು ಕೊಠಡಿಯ ಬಾಗಿಲಿನ ಬೀಗ ಮುರಿದು ಒಳ ಪ್ರವೇಶಿಸಿ ಸುಮಾರು ರೂ. 6,000/- ಮೌಲ್ಯದ ಎರಡು ಅನಿಲ ಸಿಲಿಂಡರ್‌ಗಳನ್ನು ಕಳವು ಮಾಡಿರುವುದಾಗಿ ನೀಡಿದ ದೂರಿನ ಮೇರೆಗೆ ಶನಿವಾರಸಂತೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಹಲ್ಲೆ ಪ್ರಕರಣ

ದಿನಾಂಕ 11/03/2022ರಂದು ಶನಿವಾರಸಂತೆ ಪಟ್ಟಣದ ತ್ಯಾಗರಾಜ ಕಾಲೋನಿ ನಿವಾಸಿ ರತ್ನ ಎಂಬವರು ಅವರ ನೆರೆಮನೆಯ ಸಣ್ಣಮ್ಮ ಎಂಬವರು ಮನೆಯ ಮುಂದಿನ ಚರಂಡಿಗೆ ಕಸ ಹಾಕುವುದನ್ನು ಆಕ್ಷೇಪಿಸಿದ ಕಾರಣಕ್ಕೆ ಸಣ್ಣಮ್ಮರವರು ರತ್ನರವರ ಜೊತೆಗೆ ಜಗಳವಾಡಿ ಕಲ್ಲಿನಿಂದ ಹೊಡೆದು ಹಲ್ಲೆ ಮಾಡಿರುವುದಾಗಿ ದೂರು ನೀಡಿದ್ದು ಅದೇ ರೀತಿ ರತ್ನರವರು ತನ್ನ ಮೇಲೆ ಹಲ್ಲೆ ಹಲ್ಲೆ ಮಾಡಿರುವುದಾಗಿ ಸಣ್ಣಮ್ಮರವರು ಪ್ರತಿ ದೂರು ನೀಡಿದ್ದು ಶನಿವಾರಸಂತೆ ಪೊಲೀಸರು ಎರಡೂ ದೂರುಗಳನ್ನು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ರಸ್ತೆ ಅಪಘಾತ

ದಿನಾಂಕ 11/03/2022ರಂದು ಸಕಲೇಶಪುರದ ದೊಡ್ಡಕುಂದೂರು ನಿವಾಸಿ ಪುನೀತ್‌ ಕುಮಾರ್‌ ಎಂಬವರು ಶನಿವಾರಸಂತೆಯಿಂದ ಅವರ ಬೈಕಿನಲ್ಲಿ ದೊಡ್ಡಕುಂದೂರು ಗ್ರಾಮಕ್ಕೆ ಹೋಗುತ್ತಿರುವಾಗ ದುಂಡಳ್ಳಿ ಬಳಿ ಎದುರಿನಿಂದ ಒಂದು ರಿಕ್ಷಾವನ್ನು ಅದರ ಚಾಲಕ ಲೋಕೇಶ್‌ ಎಂಬವರು ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಾಲಿಸಿಕೊಂಡು ಬಂದು ಪುನೀತ್‌ ಕುಮಾರ್‌ರವರ ಬೈಕಿಗೆ ಡಿಕ್ಕಿಪಡಿಸಿದ ಪರಿಣಾಮ ಪುನೀತ್‌ ಕುಮಾರ್‌ರವರಿಗೆ ಗಾಯಗಳಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಶನಿವಾರಸಂತೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಮನುಷ್ಯ ಕಾಣೆ ಪ್ರಕರಣ

ಕುಶಾಲನಗರ ಬಳಿಯ ಶಿರಂಗಾಲ ಗ್ರಾಮದ ನಿವಾಸಿ ಸೋಮಶೇಖರ್‌ ಎಂಬವರ ತಂದೆ ಮುರುಗೇಶ್‌ ಎಂಬವರು ದಿನಾಂಕ 09/03/2022ರಂದು ರಾತ್ರಿ ಮನೆಯಿಂದ ಹೊರಗೆ ಹೋದವರು ಇದುವರೆಗೂ ಮರಳಿ ಬಾರದೆ ಕಾಣೆಯಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ರಸ್ತೆ ಅಪಘಾತ

ದಿನಾಂಕ 10/03/2022ರಂದು ಮಡಿಕೇರಿ ಬಳಿಯ ಮದೆನಾಡು ನಿವಾಸಿ ಗಂಗಮ್ಮ ಎಂಬವರು ಮನೆಯಲ್ಲಿದ್ದಾಗ ಮಡಿಕೇರಿ ಕಡೆಯಿಂದ ಒಂದು ಲಾರಿಯನ್ನು ಅದರ ಚಾಲಕ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ನಿವಾಸಿ ಮುಸ್ತಫಾ ಎಂಬವರು ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಾಲಿಸಿಕೊಂಡು ಬಂದು ಗಂಗಮ್ಮರವರ ಮನೆಗೆ ಡಿಕ್ಕಿಪಡಿಸಿದ ಪರಿಣಾಮ ಮನೆಯ ಗೋಡೆಗಳಿಗೆ ಹಾನಿಯಾಗಿ ನಷ್ಟ ಸಂಭವಿಸಿರುವುದಾಗಿ ನೀಡಿದ ದೂರಿನ ಮೇರೆಗೆ ಮಡಿಕೇರಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 12-03-2022 12:18 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080