ಅಭಿಪ್ರಾಯ / ಸಲಹೆಗಳು

ಹಲ್ಲೆ ಪ್ರಕರಣ

ದಿನಾಂಕ 11/12/2021ರಂದು ಶನಿವಾರಸಂತೆ ಬಳಿಯ ಕುಂದಳ್ಳಿ ಗ್ರಾಮದ ಹೆಮ್ಮನೆಗದ್ದೆ ನಿವಾಸಿ ಪ್ರಮೋದ್‌ ಎಂಬವರು ಸಂಜೆ ಮನೆಗೆ ಹೋಗುತ್ತಿರುವಾಗ ಅದೇ ಗ್ರಾಮದ ಪ್ರಸನ್ನ ಮತ್ತು ಅವರ ಜೊತೆ ಉದಯ ಹಾಗೂ ಲಿಖಿತ್‌ ಎಂಬವರು ಸೇರಿಕೊಂಡು ಪ್ರಮೋದ್‌ರವರನ್ನು ದಾರಿ ತಡೆದು ಪ್ರಸನ್ನರವರ ಕೋಳಿಗಳನ್ನು ವಿಷ ಹಾಕಿ ಪ್ರಮೋದ್‌ರವರು ಸಾಯಿಸಿರುವುದಾಗಿ ಆರೋಪಿಸಿ ಜಗಳವಾಡಿ ಪ್ರಮೋದ್‌ರವರ ಮೇಲೆ ಹೊಡೆದು ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿರುವುದಾಗಿ ನೀಡಿದ ದೂರಿನ ಮೇರೆಗೆ ಶನಿವಾರಸಂತೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ರಸ್ತೆ ಅಪಘಾತ, ಮಹಿಳೆ ಸಾವು.

ದಿನಾಂಕ 10/12/2021ರಂದು ವಿರಾಜಪೇಟೆ ಬಳಿಯ ಕಾರ್ಮಾಡು ಗ್ರಾಮದ ನಿವಾಸಿ ಅಮ್ಮಂಡ ತಮ್ಮಯ್ಯ ಎಂಬವರ ತಾಯಿ ರಾಣಿ ಎಂಬವರು ಮನೆಯ ಬಳಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಒಂದು ಅಶೋಕ್‌ ಲೇಲ್ಯಾಂಡ್‌ ದೋಸ್ತ್‌ ಗೂಡ್ಸ್‌ ವಾಹನವನ್ನು ಅದರ ಚಾಲಕ ಜಾನ್‌ ಎಂಬವರು ನಿರ್ಲಕ್ಷ್ಯತನದಿಂದ ಹಿಂದಕ್ಕೆ ಚಾಲಿಸಿ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ರಾಣಿರವರಿಗೆ ಡಿಕ್ಕಿಪಡಿಸಿದ ಪರಿಣಾಮ ರಾಣಿರವರು ಗಂಭೀರ ಗಾಯಗಳಿಂದ ಮೃತರಾಗಿರುವುದಾಗಿ ನೀಡಿದ ದೂರಿನ ಮೇರೆಗೆ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 12-12-2021 12:26 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080