ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ

ದಿನಾಂಕ 12/01/2022ರಂದು ಕುಶಾಲನಗರ ಬಳಿಯ ಕೂಡುಮಂಗಳೂರು ನಿವಾಸಿ ಚಿತ್ರಾ ಎಂಬವರ ಮಗಳು ಡಿಂಪಿಕ ಎಂಬ ಬಾಲಕಿಯು ಶಾಲೆಗೆ ಹೋಗಲು ಮನೆ ಮುಂಭಾಗದ ರಸ್ತೆಯನ್ನು ದಾಟುತ್ತಿರುವಾಗ ಕುಶಾಲನಗರ ಕಡೆಯಿಂದ ಒಂದು ಕಾರನ್ನು ಅದರ ಚಾಲಕ ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಾಲಿಸಿಕೊಂಡು ಬಂದು ರಸ್ತೆ ದಾಟುತ್ತಿದ್ದ ಬಾಲಕಿ ಡಿಂಪಿಕಳಿಗೆ ಡಿಕ್ಕಿಪಡಿಸಿದ ಪರಿಣಾಮ ಡಿಂಪಿಕಾಳಿಗೆ ಗಾಐಗಳಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಕುಶಾಲನಗರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಹಲ್ಲೆ ಪ್ರಕರಣ

ದಿನಾಂಕ 13/01/2022ರಂದು ಶ್ರೀಮಂಗಲ ಬಳಿಯ ಬಿರುನಾಣಿ ಗ್ರಾಮದ ಕಳಕೂರು ನಿವಾಸಿ ಕುಪ್ಪಣಮಾಡ ಮಧುರ ಎಂಬವರು ಅವರ ಪತಿಯಿಂದಿಗೆ ತೋಟದಿಂದ ಮನೆಗೆ ಬರುತ್ತಿರುವಾಗ ದಾರಿಯಲ್ಲಿ ಅದೇ ಗ್ರಾಮದ ನಿವಾಸಿ ಕೆ.ಡಿ.ಗೌತಮ್‌ ಎಂಬಾತನು ದಾರಿ ತಡೆದು ಹಣಕಾಸಿನ ವ್ಯವಹಾರದ ವಿಚಾರವಾಗಿ ಮಧುರವರೊಂದಿಗೆ ಜಗಳವಾಡಿ ಅವರನ್ನು ಎಳೆದಾಡಿ ನಂತರ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವುದಾಗಿ ನೀಡಿದ ದೂರಿನ ಮೇರೆಗೆ ಶ್ರೀಮಂಗಲ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ರಸ್ತೆ ಅಪಘಾತ

ದಿನಾಂಕ 14/01/2022ರಂದು ಕುಶಾಲನಗರದ ಎಪಿಸಿಎಂಎಸ್‌ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಶೇಷಾನಂದ ಯಾನೆ ಮನು ಎಂಬವರು ಕುಶಾಲನಗರದ ಗಣೇಶ ಭವನ ಹೋಟೆಲ್‌ ಕಡೆಯಿಂದ ಎಪಿಸಿಎಂಎಸ್‌ ಔಷಧಿ ಅಂಗಡಿಗೆ ಹೋಗಲು ರಸ್ತೆ ದಾಟುತ್ತಿರುವಾಗ ಕುಶಾಲನಗರ ಬಸ್‌ ನಿಲ್ದಾಣ ಕಡೆಯಿಂದ ಕೆಎಸ್‌ಆರ್‌ಟಿಸಿ ಸಂಸ್ಥೆಯ ಒಂದು ಐರಾವತ ಬಸ್ಸನ್ನು ಅದರ ಚಾಲಕ ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಶೇಷಾನಂದರವರಿಗೆ ಡಿಕ್ಕಿಪಡಿಸಿದ ಪರಿಣಾಮ ಅವರಿಗೆ ಗಾಯಗಳಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಹಲ್ಲೆ ಪ್ರಕರಣ

ದಿನಾಂಕ 13/01/2022ರಂದು ಹಾಲುಗುಂದ ನಿವಾಸಿ ಬಿ.ಎಸ್.ಲೋಕೇಶ್‌ ಎಂಬವರು ಅವರ ಮನೆಯಲ್ಲಿರುವಾಗ ಅವರ ನರೆಮನೆಯ ನಿವಾಶಿ ಶ್ರೀನಿವಾಸ್‌ ಎಂಬವರು ಕ್ಷುಲ್ಲಕ ಕಾರಣಕ್ಕೆ ಲೋಕೇಶ್‌ ಹಾಗೂ ಅವರ ತಮ್ಮ ಅಪ್ಪಚ್ಚುರವರನ್ನು ಅಶ್ಲೀಲ ಶಬ್ದಗಳಿಂದ ನಿಂದಿಸಿ ಕತ್ತಿಯಿಂದ ಲೋಕೇಶ್‌ರವರ ತಲೆಗೆ ಕಡಿದು ಹಲ್ಲೆ ಮಾಡಿರುವುದಾಗಿ ದೂರು ನೀಡಿದ್ದು ಅದೇ ರೀತಿ ಲೋಕೇಶ್‌ ಮತ್ತು ಅವರ ತಮ್ಮ ಅಪ್ಪಚ್ಚುರವರು ಸೇರಿಕೊಂಡು ಶ್ರೀನಿವಾಸರವರ ಮೇಲೆ ದೊಣ್ಣೆಯಿಂದ ಹೊಡೆದು ಹಲ್ಲೆ ಮಾಡಿರುವುದಾಗಿ ಪ್ರತಿ ದೂರು ನೀಡಿದ್ದು ಸಿದ್ದಾಪುರ ಪೊಲೀಸರು ಎರಡೂ ದೂರುಗಳನ್ನು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 15-01-2022 11:43 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080