ಅಭಿಪ್ರಾಯ / ಸಲಹೆಗಳು

ಹಲ್ಲೆ ಪ್ರಕರಣ

ದಿನಾಂಕ 15/04/2021ರಂದು ಸೋಮವಾರಪೇಟೆ ನಗರದ ನಿವಾಸಿ ಸಂಪತ್‌ ಕುಮಾರ್‌ ಎಂಬವರು ಹಾನಗಲ್ಲು ಗ್ರಾಮದ ಅವರ ಸ್ನೇಹಿತರ ಮನೆಗೆ ಹೋಗಿ ಬರುತ್ತಿದ್ದಾಗ ಗ್ರಾಮದ ಗಣಪತಿ ದೇವಸ್ಥಾನದ ಬಳಿ ಹಾನಗಲ್ಲು ಗ್ರಾಮದ ಮಿಥುನ್ ಮತ್ತು ಸಂಗಡಿಗರು ಸಂಪತ್‌ ಕುಮಾರ್‌ರವರ ವಾಹನವನ್ನು ಅಡ್ಡಗಟ್ಟಿ ವಾಹನದ ಗಾಜುಗಳನ್ನು ಒಡೆದು ಪುಡಿಮಾಡಿ ಸಂಪತ್‌ ಕುಮಾರ್‌ರವರನ್ನು ಹೊರಗೆಳೆದು ಹಲ್ಲೆ ಮಾಡಿ ಮಿಥುನ್‌ರವರು ಕೈಯಲ್ಲಿದ್ದ ಮಚ್ಚಿನಿಂದ ಸಂಪತ್‌ ಕುಮಾರ್‌ರವರ ಕತ್ತಿನ ಬಾಗಕ್ಕೆ ಕಡಿಯಲೆತ್ನಿಸಿರುವುದಾಗಿ ನೀಡಿದ ದೂರಿನ ಮೇರೆಗೆ ಸೋಮವಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಕಳವು ಪ್ರಕರಣ

ಮಡಿಕೇರಿಯ ಚೌಕಿ ಬಳಿ ಇರುವ ನಾಗೇಶ್‌ ಜನರಲ್‌ ಸ್ಟೋರ್‌ ಅಂಗಡಿಗೆ ದಿನಾಂಕ 14/04/2021ರ ರಾತ್ರಿ ವೇಳೆ ಯಾರೋ ಕಳ್ಳರು ಅಂಗಡಿಯ ಬಾಗಿಲಿನ ಬೀಗ ಮುರಿದು ಒಳ ಪ್ರವೇಶಿಸಿ ಅಂಗಡಿಯೊಳಗಿದ್ದ ರೂ.20,500/- ನಗದನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ನೀಡಿದ ದೂರಿನ ಮೇರೆಗೆ ಮಡಿಕೇರಿ ನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ರಸ್ತೆ ಅಪಘಾತ

ದಿನಾಂಕ 14/04/2021ರ ರಾತ್ರಿ ವೇಳೆ ಮೈಸೂರಿನ ಹೆಬ್ಬಾಲದ ನಿವಾಸಿ ಎಂ.ಬಿ.ತಿಮ್ಮಯ್ಯ ಎಂಬವರು ಮಂಗಳೂರಿನಿಂದ ಮೈಸೂರಿಗೆ ವಾಹನದ ಟಯರುಗಳನ್ನು ಲಾರಿಯಲ್ಲಿ ಸಾಗಿಸುತ್ತಿರುವಾಗ ಸುಂಟಿಕೊಪ್ಪ ಬಳಿಯ ಕೆದಕಲ್‌ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಂಟಿಕೊಪ್ಪ ಕಡೆಯಿಂದ ಒಂದು ಕಾರನ್ನು ಅದರ ಚಾಲಕ ಕುಶಾಲನಗರದ ಮಾದಾಪಟ್ನದ ಚಿಟ್ಟಿಯಪ್ಪ ಎಂಬವರು ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಾಲಿಸಿಕೊಂಡು ಬಂದು ಲಾರಿಯ ಡೀಸೆಲ್‌ ಟ್ಯಾಂಕಿಗೆ ಡಿಕ್ಕಿಪಡಿಸಿದ ಪರಿಣಾಮ ಎರಡೂ ವಾಹನಗಳಿಗೆ ಬೆಂಕಿ ಹತ್ತಿಕೊಂಡು ಲಾಋಯಲ್ಲಿದ್ದ ಟಯರು ಸಮೇತ ಲಾರಿ ಹಾಗೂ ಕಾರುಗಳು ಸುಟ್ಟುಹೋಗಿರುವುದಾಗಿ ನೀಡಿದ ದೂರಿನ ಮೇರೆಗೆ ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಬೈಕ್‌ ಕಳವು ಪ್ರಕರಣ

ಕುಶಾಲನಗರ ಬಳಿಯ ಹೆಬ್ಬಾಲೆ ನಿವಾಸಿ ಪ್ರಕಾಶ ಎಂಬವರು ದಿನಾಂಕ 11/04/2021ರಂದು ಅವರ ಬೈಕನ್ನು ಮನೆಯ ಹೊರಗಡೆ ನಿಲ್ಲಿಸಿದ್ದು ಮಾರನೇ ದಿನ ಬೆಳಿಗ್ಗೆ ನೋಡಿದಾಗ ಅವರ ಬೈಕು ಕಾಣೆಯಾಗಿದ್ದು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿ ನೀಡಿದ ದೂರಿನ ಮೇರೆಗೆ ಕುಶಾಲನಗರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ರಸ್ತೆ ಅಪಘಾತ

ದಿನಾಂಕ 14/04/2021ರ ರಾತ್ರಿ ವೇಳೆ ಸಂಪಾಜೆ ಬಳಿಯ ಕೊಯನಾಡು ಬಳಿ ಕುಶಾಲನಗರದಿಂದ ಮಂಗಳೂರಿನ ಬಂದರಿಗೆ ಕಾಫಿಯನ್ನು ಸಾಗಿಸುತ್ತಿದ್ದ ಒಂದು ಕಂಟೈನರ್‌ ಲಾರಿಯನ್ನು ಚಾಲಿಸುತ್ತಿದ್ದ ಅದರ ಚಾಲಕ ಚಂದ್ರಹಾಸ ಎಂಬವರು ಲಾರಿಯನ್ನು ಅಜಾಗರೂಕತೆಯಿಂದ ಚಾಲಿಸಿದ ಪರಿಣಾಮ ಲಾರಿ ಚಾಲಕನ ಹತೋಟಿ ತಪ್ಪಿ ರಸ್ತೆ ಬದಿಯಲ್ಲಿ ಮಗುಚಿಕೊಂಡು ಅಪಘಾತಕ್ಕೀಡಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಮಡಿಕೇರಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 16-04-2021 04:47 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ