ಅಭಿಪ್ರಾಯ / ಸಲಹೆಗಳು

 ಅಕ್ರಮ ಮದ್ಯ ಮಾರಾಟ

ದಿನಾಂಕ 16/04/2021ರಂದು ಕುಟ್ಟ ಬಳಿಯ ಕೋತೂರು ಗ್ರಾಮದಲ್ಲಿ ಗ್ರಾಮದ ನಿವಾಸಿ ಭಾಗ್ಯರತಿ ಎಂಬವರು ಅವರ ಮನೆಯ ಮುಂದಿನ ಗೇಟಿನ ಬಳಿ ಸಾರ್ವಜನಿಕ ಸ್ಥಳದಲ್ಲಿ ಸರ್ಕಾರದ ಪರವಾನಗಿ ಇಲ್ಲದೆ ಅಕ್ರಮವಾಗಿ ಮದ್ಯವನ್ನು ಕುಡಿಯಲು ಸಾರ್ವಜನಿಕರಿಗೆ ಅನುವು ಮಾಡಿಕೊಡುತ್ತಿರುವುದಾಗಿ ದೊರೆತ ಸುಳಿವಿನ ಮೇರೆಗೆ ಕುಟ್ಟ ಪಿಎಸ್‌ಐ ಚಂದ್ರಪ್ಪ ಹೆಚ್‌.ಜೆ.ರವರು ಸಿಬ್ಬಂದಿಗಳೊಡನೆ ಸ್ಥಳಕ್ಕೆ ಭೇಟಿ ನೀಡಿ ಆರೋಪಿ ಕೃತ್ಯವನ್ನು ಪತ್ತೆ ಹಚ್ಚಿ ಕುಟ್ಟ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಕಳವು ಪ್ರಕರಣ

ವಿರಾಜಪೇಟೆ ಬಳಿಯ ಬೇಟೋಳಿ ಗ್ರಾಮದಲ್ಲಿ ವಾಸವಿರುವ ಸಿ.ಅಶೋಕ್‌ ರೆಡ್ಡಿ ಎಂಬವರಿಗೆ ಸೇರಿದ ಸುಮಾರು ರೂ. 25,000/- ಮೌಲ್ಯದ ಒಂದು .22 ರೈಫಲ್‌ಅನ್ನು ಯಾರೋ ಕಳ್ಳರು ಕಳವು ಮಾಡಿರುವುದಾಗಿ ನೀಡಿದ ದೂರಿನ ಮೇರೆಗೆ ವಿರಾಜಪೇಟೆ ನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ರಸ್ತೆ ಅಪಘಾತ

ದಿನಾಂಕ 15/04/2021ರಂದು ಸಿದ್ದಾಪುರ ಬಳಿಯ ಚನ್ನಯ್ಯನಕೋಟೆ ನಿವಾಸಿ ಹೆಚ್‌.ಕೆ.ಈಶ್ವರ ಎಂಬವರ ಬೈಕನ್ನು ಅವರ ಸ್ನೇಹಿತ ಕ್ಲಿಟೇಶ್‌ ಎಂಬವರು ಚಾಲಿಸಿಕೊಂಡು ಚೆನ್ನಂಗಿ ಕಡೆಗೆ ಹೋಗುತ್ತಿರುವಾಗ ಎದುರಿನಿಂದ ಒಂದು ಜೀಪನ್ನು ಅದರ ಚಾಲಕ ಹುಸೇನ್‌ ಎಂಬವರು ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಾಲಿಸಿಕೊಂಡು ಬಂದು ಕ್ಲಿಟೇಶ್‌ ಚಾಲಿಸುತ್ತಿದ್ದ ಬೈಕಿಗೆ ಡಿಕ್ಕಿಪಡಿಸಿದ ಪರಿಣಾಮ ಕ್ಲಿಟೇಶ್‌ರವರು ಕೆಲಗೆ ಬಿದ್ದು ಅವರ ಕಾಲಿನ ಮೂಳೆ ಮುರಿದು ಗಾಯಗಳಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಸಿದ್ದಾಪುರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ವ್ಯಕ್ತಿ ಆತ್ಮಹತ್ಯೆ

ದಿನಾಂಕ 15/04/2021ರ ರಾತ್ರಿ ವೇಳೆ ಬಲಮುರಿ ಗ್ರಾಮದ ಬಳಿಯ ಕುದುಪರಂಬು ಪೈಸಾರಿ ನಿವಾಸಿ ಯಂಕಟ ಎಂಬವರು ಬಲಮುರಿ ಸೇತುವೆ ಬಳಿ ಕಳೆ ನಾಶಕ ಔಷಧಿಯನ್ನು ಸೇವಿಸಿ ಅಸ್ವಸ್ಥರಾಗಿದ್ದವರು ದಿನಾಂಕ 16/04/2021ರಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತರಾಗಿರುವುದಾಗಿ ನೀಡಿದ ದೂರಿನ ಮೇರೆಗೆ ನಾಪೋಕ್ಲು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 17-04-2021 04:19 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ