ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ, ಗಾಯಾಳು ಸಾವು

ದಿನಾಂಕ 13/04/2021ರಂದು ವಿರಾಜಪೇಟೆ ಬಳಿಯ ಒಂಟಿಯಂಗಡಿ ಗ್ರಾಮದಲ್ಲಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಹೆಚ್‌.ಟಿ.ಕೀರ್ತನ್‌ ಎಂಬ ಯುವಕನಿಗೆ ಕೆ.ಅರ್‌.ದೇವಯ್ಯ ಎಂಬವರು ಅವರ ಟ್ರ್ಯಾಕ್ಟರನ್ನು ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಾಲಿಸಿಕೊಂಡು ಬಂದು ಡಿಕ್ಕಿಪಡಿಸಿದ ಪರಿಣಾಮ ಗಂಭೀರ ಗಾಯಗಳಿಂದ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಗಾಯಾಳು ಕೀರ್ತನ್‌ರವರು ದಿನಾಂಕ 16/04/2021ರಂದು ಮೃತರಾಗಿರುವುದಾಗಿ ನೀಡಿದ ದೂರಿನ ಮೇರೆಗೆ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಆನ್‌ಲೈನ್‌ ಹಣ ವಂಚನೆ

ಸಿದ್ದಾಪುರ ಬಳಿಯ ಮಾಲ್ದಾರೆ ನಿವಾಸಿ ಶೋಭಾ ಎಂಬವರ ಬ್ಯಾಂಕಿನ ಖಾತೆಯಿಂದ ಯಾರೋ ಅಪರಿಚಿತರು ಶೋಭಾರವರ ಅರಿವಿಗೆ ಬಾರದಂತೆ ರೂ.32,900/- ಹಣವನ್ನು ಶೋಭಾರವರ ಖಾತೆಯಿಂದ ವರ್ಗಾಯಿಸಿಕೊಂಡು ವಂಚಿಸಿರುವುದಾಗಿ ನೀಡಿದ ದೂರಿನ ಮೇರೆಗೆ ಮಡಿಕೇರಿಯ ಸಿಇಎನ್‌ ವಿಶೇಷ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಬೈಕ್‌ ಕಳವು ಪ್ರಕರಣ

ಕುಶಾಲನಗರ ಬಳಿಯ ಹೆಬ್ಬಾಲೆ ಗ್ರಾಮದ ಬನಶಂಕರಿ ಬಡಾವಣೆ ವಾಸಿ ಹರೀಶ್‌ ಹೆಚ್‌.ಕೆ. ಎಂಬವರು ಅವರ ಬೈಕನ್ನು ದಿನಾಂಕ 11/04/2021 ರಂದು ಮನೆಯ ಮುಂದೆ ನಿಲ್ಲಿಸಿದ್ದು ಮಾರನೇ ದಿನ ಬೆಳಿಗ್ಗೆ ನೋಡುವಾಗ ಬೈಕು ಕಾಣೆಯಾಗಿದ್ದು ಯಾರೋ ಕಳ್ಳರು ಕಳವು ಮಾಡಿರುವುದಾಗಿ ನೀಡಿದ ದೂರಿನ ಮೇರೆಗೆ ಕುಶಾಲನಗರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಕೆರೆಯಲ್ಲಿ ಮುಳುಗಿ ಬಾಲಕ ಸಾವು

ದಿನಾಂಕ 17/04/2021ರಂದು ಮಡಿಕೇರಿ ಬಳಿಯ ಕಡಗದಾಳು ನಿವಾಸಿ ಶಿವಬಾಲನ್‌ ಎಂಬವರ ಮಗ ಸಂತೋಷ್‌ ಎಂಬ ಬಾಲಕನು ಸ್ನೇಹಿತರೊಂದಿಗೆ ಕಡಗದಾಲಿನ ಮಾಳೇಟಿರ ಜಗದೀಶ್‌ ಎಂಬವರ ಕೆರೆಯಲ್ಲಿ ಆಟವಾಡುತ್ತಿದ್ದು ನೀರಿನಲ್ಲಿ ಆಕಸ್ಮಿಕವಾಗಿ ಮುಳುಗಿ ಸಾವನ್ನಪ್ಪಿರುವುದಾಗಿ ನೀಡಿದ ದೂರಿನ ಮೇರೆಗೆ ಮಡಿಕೇರಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.  

ಇತ್ತೀಚಿನ ನವೀಕರಣ​ : 18-04-2021 11:33 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ