ಅಭಿಪ್ರಾಯ / ಸಲಹೆಗಳು

 ಹಲ್ಲೆ ಪ್ರಕರಣ

ದಿನಾಂಕ 21/01/2022ರಂದು ರಾತ್ರಿ ವೇಳೆ ಸುಂಟಿಕೊಪ್ಪ ಬಳಿಯ 7ನೇ ಹೊಸಕೋಟೆ ನಿವಾಸಿ ಟಿ.ಜಿ.ವಿನಯ್‌ ಎಂಬವರ ನೆರೆಮನೆ ನಿವಾಸಿ ದಿನೇಶ ಎಂಬವರು ಪಾನಮತ್ತರಾಗಿ ಅಕ್ಕಪಕ್ಕದವರೊಂದಿಗೆ ಜಗಳವಾಡುತ್ತಿದ್ದು ಅದೇ ವೇಳೆಗೆ ಕೆಲಸ ಮುಗಿಸಿ ವಿನಯ್‌ರವರ ಮನೆಯ ಬಳಿ ಬಂದ ಮಹೇಶ ಎಂಬವರೊಡನೆ ಜಗಳವಾಡುತ್ತಿದ್ದುದನ್ನು ವಿಚಾರಿಸಲು ಬಂದ ವಿನಯ್‌ರವರ ಮೇಲೆ ದೊಣ್ಣೆಯಿಂದ ಹೊಡೆದು ಹಲ್ಲೆ ಮಾಡಿದ್ದು ಜಗಳದ ಸದ್ದು ಕೇಳಿ ಸ್ಥಳಕ್ಕೆ ಬಂದ ಪಕ್ಕದ ಮನೆಯ ವಿಶ್ವ ಎಂಬವರ ಮೇಲೂ ದಿನೇಶ್‌ರವರು ಹಲ್ಲೆ ಮಾಡಿ ಪುನಃ ಮನೆಯಿಂದ ಕತ್ತಿ ತಂದು ದಿನೇಶ್‌ರವರು ವಿಶ್ವರವರ ಮೇಲೆ ಕತ್ತಿಯಿಂದ ಹಲ್ಲೆ ಮಾಡಿ ಗಾಯಗೊಳಿಸಿರುವುದಾಗಿ ನೀಡಿದ ದೂರಿನ ಮೇರೆಗೆ ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಮನುಷ್ಯ ಕಾಣೆ ಪ್ರಕರಣ

ಕುಶಾಲನಗರ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಎಎಸ್‌ಐ ಆಗಿ ಕರ್ತವ್ಯ ನಿರ್ವಹಿಸಿಕೊಂಡಿದ್ದ ಎಸ್.ಎಂ.ಸುರೇಶ್‌ ಎಂಬವರು ದಿನಾಂಕ 20/01/2022ರಿಂದ ಮನೆಗೆ ಬಾರದೆ ಕಾಣೆಯಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಕುಶಾಲನಗರ ಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ರಸ್ತೆ ಅಪಘಾತ

ದಿನಾಂಕ 22/01/2022ರಂದು ಸಂಪಾಜೆ ಬಳಿಯ ಕೊಯನಾಡು ಗ್ರಾಮದಲ್ಲಿ ಒಂದು ಮಿನಿ ಲಾರಿಯನ್ನು ಅದರ ಚಾಲಕ ಅತಿ ವೇಗ ಮತ್ತು ಅಜಾಗರೂಕತೆಯಿಂದ ಲಾರಿಯನ್ನು ಚಾಲಿಸಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿನ ಸೇತುವೆಗೆ ಡಿಕ್ಕಿಪಡಿಸಿದ ಪರಿಣಾಮ ಸೇತುವೆ ಹಾಗೂ ಲಾರಿಗೆ ಹಾನಿಯುಂಟಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಮಡಿಕೇರಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಕಳವು ಪ್ರಕರಣ

ವಿರಾಜಪೇಟೆ ಬಳಿಯ ಕುಂಜಿಲಗೇರಿ ನಿವಾಸಿ ಕೂತಂಡ ಸುರೇಶ್‌ ಎಂಬವರ ತೋಟದ ಬಾವಿಯಲ್ಲಿದ್ದ ನೀರಿನ ಮೋಟಾರ್‌ ಅನ್ನು ದಿನಾಂಕ 20/01/2022 ರಿಂದ 22/01/2022ರ ನಡುವೆ ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿ ನೀಡಿದ ದೂರಿನ ಮೇರೆಗೆ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಕೋವಿಡ್‌ ನಿಯಮ ಉಲ್ಲಂಘನೆ ಪ್ರಕರಣ

ಜಿಲ್ಲೆಯಲ್ಲಿ ಸಾಂಕ್ರಾಮಿಕವಾಗಿರುವ ಕೋವಿಡ್-19ರ ಪ್ರಸರಣವನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಹಾಗೂ ಜಿಲ್ಲಾಡಳಿತವು ಹಲವು ಮಾರ್ಗಸೂಚಿಗಳನ್ನು ಹೊರಡಿಸಿದ್ದು ಅದರಂತೆ ಜಿಲ್ಲೆಯ ಹೋಟೆಲ್‌, ಹೋಂ ಸ್ಟೇ ಮತ್ತು ರೆಸಾರ್ಟ್‌ಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ನಿಗದಿತ ಕೋವಿಡ್‌ ಪರೀಕ್ಷೆ ನಡೆಸಿರುವ ಬಗ್ಗೆ ವಿರಾಜಪೇಟೆ ಗ್ರಾಮಾಂತರ ಠಾಣೆಯ ಪಿಎಸ್‌ಐ ಸಿದ್ದಲಿಂಗ ಬಾನಸೆರವರು ಬಿಟ್ಟಂಗಾಲ ಗ್ರಾಮದಲ್ಲಿರುವ ಅಂಬಟ್ಟಿ ಗ್ರೀನ್ಸ್‌ ರೆಸಾರ್ಟಿಗೆ ಭೇಟಿ ನೀಡಿ ಪರಿಶೀಲಿಸಿದಾಗ ಅಲ್ಲಿನ ಸುಮಾರು 7 ಮಂದಿ ಸಿಬ್ಬಂದಿಗಳಿಗೆ ಯಾವುದೇ ರೀತಿಯ ಕೋವಿಡ್‌ ಪರೀಕ್ಷೆ ನಡೆಸದೆ ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಳಂಘಿಸಿರುವುದು ಕಂಡು ಬಂದಿರುವುದಾಗಿ  ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ಇತ್ತೀಚಿನ ನವೀಕರಣ​ : 23-01-2022 11:51 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080