ಅಭಿಪ್ರಾಯ / ಸಲಹೆಗಳು

ನಕಲಿ ಕೋವಿಡ್‌ ನೆಗೆಟಿವ್‌ ವರದಿ, ಪ್ರಕರಣ ದಾಖಲು

 

ಕೊಡಗು ಜಿಲ್ಲೆಯಲ್ಲಿ ನಕಲಿ ಕೋವಿಡ್ ನೆಗೆಟಿವ್ ರಿಪೋರ್ಟ್ ತಯಾರಿಸಿ ಕೊಡುತ್ತಿದ್ದ ಪತ್ರಕರ್ತನೊಬ್ಬನನ್ನು ಮಡಿಕೇರಿ ನಗರ ಹಾಗು ಕುಟ್ಟ ಪೊಲೀಸರು ಬಂಧಿಸಿದ್ದಾರೆ.

ದೇಶದ್ಯಾಂತ ಕೋವಿಡ್-19 ಪ್ರಕರಣಗಳು ಸಾಂಕ್ರಾಮಿಕವಾಗಿ ಹರಡುತ್ತಿರುವ ಕಾರಣ, ರಾಜ್ಯದ ಗಡಿ ಭಾಗದ ಚೆಕ್ ಪೋಸ್ಟ್ ಗಳಲ್ಲಿ ಕರ್ನಾಟಕ-ಕೇರಳ ರಾಜ್ಯಗಳ ನಡುವೆ ಸಂಚರಿಸುವ ವಾಹನ ಮತ್ತು ಅದರಲ್ಲಿ ಬರುವ ಪ್ರಯಾಣಿಕರು ಹಾಗೂ ಕಾಲು ನಡಿಗೆಯಲ್ಲಿ ಸಂಚರಿಸುವವರು ಕಡ್ಡಾಯವಾಗಿ 72 ಗಂಟೆಗಳ ಒಳಗೆ ಪಡೆದಿರುವ ಕರೋನಾ RTPCR ನೆಗೆಟಿವ್ ವರದಿ ಹೊಂದಿರತಕ್ಕದ್ದು ಎಂಬುದಾಗಿ ಆದೇಶ ಮೇರೆಗೆ ದಿನಾಂಕ 24-5-2021 ರಂದು ಕುಟ್ಟ ಪೊಲೀಸ್ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಕುಟ್ಟ ಪೊಲೀಸ್ ಠಾಣಾ ಸಿಬ್ಬಂದಿ ಬಿ.ವಿ. ಹರೀಶ್ ಕುಮಾರ್ ಹಾಗು ಆರೋಗ್ಯ ಇಲಾಖೆಯ ನಾಗೇಂದ್ರ ಚೆಕ್ ಪೋಸ್ಟ್ ಗಳಲ್ಲಿ ಸಂಚರಿಸುವ ವಾಹನಗಳನ್ನು ತಪಾಸಣೆ ಮಾಡುತ್ತಿರುವಾಗ, ಸಂಜೆ ಸುಮಾರು 4.45 ಗಂಟೆಗೆ, ಕೇರಳ ರಾಜ್ಯ ಕಡೆಯಿಂದ ಬಂದ KA-12-B-4623 ನೋಂದಣಿಯ ಒಂದು ಗೂಡ್ಸ್ ವಾಹನ ಪರಿಶೀಲಿಸಿದ್ದು ಲಾರಿಯಲ್ಲಿದ್ದ ಚಾಲಕ ಸಿದ್ದಾಪುರ ಬಳಿಯ ನೆಲ್ಲಿಹುದಿಕೇರಿಯ ಜಂಶೀರ್ ಎಂಬಾತನು ತೋರಿಸಿದ ಕರ್ನಾಟಕ ಸರಕಾರದ ಕೋವಿಡ್ RTPCR ನೆಗೆಟಿವ್ ವರದಿಯನ್ನು ಅದರ ಸಂಖ್ಯೆಯನ್ನು ಕ್ಯೂಆರ್ ಕೋಡ್ ಸ್ಕ್ಯಾನಿಂಗ್ ಮೂಲಕ ಪರಿಶೀಲಿಸಿದಾಗ ಆ ವರದಿ ನಕಲಿ ಎಂದು ಕಂಡು ಬಂದ ಹಿನ್ನೆಲೆಯಲ್ಲಿ ಚಾಲಕ ಜಂಶೀರ್ ನನ್ನು ಈ ಬಗ್ಗೆ ವಿಚಾರಣೆಗೊಳಪಡಿಸಿದಾಗ ಸದರಿ RTPCR ವರದಿಯನ್ನು ಸಿದ್ದಾಪುರದ ವಿಜಯವಾಣಿ ಪತ್ರಿಕೆ ವರದಿಗಾರ ಅಬ್ದುಲ್ ಅಜೀಜ್ ಎಂಬಾತನು ಕೇರಳಕ್ಕೆ ಪ್ರಯಾಣಿಸುವವರಿಗೆ ಆತನ ಸ್ಟುಡಿಯೋದಲ್ಲಿಯೇ RTPCR ವರದಿಯನ್ನು ತಯಾರಿಸಿ ನೀಡುತ್ತಿರುವುದಾಗಿ ತಿಳಿಸಿದ್ದು, ಅದರಂತೆ ಕೂಡಲೇ ಕಾರ್ಯಪ್ರವೃತ್ತರಾದ ಮಡಿಕೇರಿ ನಗರ ವೃತ್ತ ನಿರೀಕ್ಷಕರಾದ ಅನೂಪ್ ಮಾದಪ್ಪ ಹಾಗು ಸಿಬ್ಬಂದಿಯವರು ಸಿದ್ದಾಪುರದ ಪತ್ರಕರ್ತ ಅಬ್ದುಲ್ ಅಜೀಜ್ ನನ್ನು ಬಂಧಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟ್ಟ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಿಸಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಈ ಪ್ರಕರಣವನ್ನು ಪತ್ತೆ ಹಚ್ಚಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಕಾರ್ಯಕ್ಷಮತೆಯನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾರವರು ಶ್ಲಾಘಿಸಿದ್ದಾರೆ.

 

ರಸ್ತೆ ಅಪಘಾತ

ದಿನಾಂಕ 24/05/2021ರಂದು ಕರಿಕೆ ಬಳಿಯ ಚೆತ್ತುಕಾಯ ನಿವಾಸಿ ಅಶ್ವಥ್‌ ಎಂಬವರು ಬೈಕಿನಲ್ಲಿ ಆಲತ್ತಿಕಡವಿಗೆ ಹೋಗುತ್ತಿರುವಾಗ ಎಳ್ಳುಕೊಚ್ಚಿ ಗ್ರಾಮದ ಬಳಿ ಚೆತ್ತುಕಾಯ ಕಡೆಯಿಂದ ಒಂದು ರಿಕ್ಷಾವನ್ನು ಅದರ ಚಾಲಕ ಜಯಂತ ಎಂಬವರು ರಿಕ್ಷಾವನ್ನು ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಾಲಿಸಿಕೊಂಡು ಬಂದು ಅಶ್ವಥರವರ ಬೈಕಿಗೆ ಡಿಕ್ಕಿಪಡಿಸಿದ ಪರಿಣಾಮ ಅಶ್ವಥರವರಿಗೆ ಗಾಯಗಳಾಗಿರುವುದಾಗಿ ದೂರು ನೀಡಿದ ಮೇರೆಗೆ ಭಾಗಮಂಡಲ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಹಲ್ಲೆ ಪ್ರಕರಣ

ದಿನಾಂಕ 24/05/2021ರಂದು ಎಳ್ಳುಕೊಚ್ಚಿ ನಿವಾಸಿ ಜಯಂತರವರು ಎಳ್ಳುಕೊಚ್ಚಿಯ ಶ್ರೀ ಲಕ್ಷ್ಮಿ ಹೋಟೆಲಿನಿಂದ ಊಟವನ್ನು ಪಾರ್ಸೆಲ್‌ ಮಾಡಿಸಿಕೊಂಡು ಹೊರ ಬರುವಾಗ ಹೋಟೆಲ್‌ ಪಕ್ಕದ ಕೊಠಡಿಯಲ್ಲಿದ್ದ ಬಾಲಕೃಷ್ಣ ನಾಯರ್‌, ಅಶ್ವಥ್‌ ಮತ್ತು ಇತರರು ಗ್ರಾಮ ಪಂಚಾಯತ್‌ ಚುನಾವಣೆಯ ವಿಚಾರದಲ್ಲಿ ಜಗಳವಾಡಿ ಜಯಂತರವರ ಮೇಲೆ ಹಲ್ಲೆ ನಡೆಸಿ ಜಯಂತರವರ ರಿಕ್ಷಾವನ್ನು ಹಾನಿಪಡಿಸಿ ಕೊಲೆ ಬೆದರಿಕೆ ಹಾಕಿರುವುದಾಗಿ ನೀಡಿದ ದೂರಿನ ಮೇರೆಗೆ ಭಾಗಮಂಡಲ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 25-05-2021 02:19 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080