ಅಭಿಪ್ರಾಯ / ಸಲಹೆಗಳು

ವಂಚನೆ ಪ್ರಕರಣ

ಮಡಿಕೇರಿ ಸಮೀಪದ ಕಗ್ಗೋಡ್ಲು ನಿವಾಸಿ ವಿದ್ಯಾಶ್ರೀ ಎ.ಕೆ. ಎಂಬವರ ತಾಯಿಯವರಿಗೆ 2020ನೇ ಡಿಸೆಂಬರಿನಲ್ಲಿ ನಾಪ್ಟಾಲ್‌ ಸಂಸ್ಥೆಯಿಂದ ಸುಮಾರು ರೂ.12 ಲಕ್ಷ ಬಹುಮಾನ ಬಂದಿರುವುದಾಗಿ ಅಂಚೆ ಮೂಲಕ ಮಾಹಿತಿ ಬಂದಿದ್ದು ಅದನ್ನು ಪಡೆಯಲು ತೆರಿಗೆ ಹಾಗೂ ನಿರ್ವಹಣಾ ಶುಲ್ಕ ನೀಡಬೇಕಾಗಿ ಸಂಸ್ಥೆಯ ಕಡೆಯವರೆಂದು ಪರಿಚಯಿಸಿಕೊಂಡು ದೂರವಾಣಿ ಮೂಲಕ ಕರೆ ಮಾಡಿದ ಕೆಲವರು ತಿಳಿಸಿದ ಮೇರೆಗೆ ವಿದ್ಯಾಶ್ರೀರವರು ಅವರ ತಾಯಿಯ ಬ್ಯಾಂಕ್‌ ಖಾತೆಯಿಂದ ಸುಮಾರು ರೂ.18,08,000/- ಹಣವನ್ನು ಹಂತ ಹಂತವಾಗಿ ದೂರವಾಣಿ ಕರೆ ಮಾಡಿದವರು ತಿಳಿಸಿದ ಬ್ಯಾಂಕ್‌ ಖಾತೆಗೆ ವರ್ಗಾಯಿಸಿದ್ದು ನಂತರ ನಾಪ್ಟಾಲ್‌ ಸಂಸ್ಥೆಯವರು ಬಹುಮಾನದ ಹಣವನ್ನು ಮತ್ತು ವಿದ್ಯಾಶ್ರೀರವರು ವರ್ಗಾಯಿಸಿದ ಹಣವನ್ನೂ ನೀಡದೆ ವಂಚಿಸಿರುವುದಾಗಿ ನೀಡಿದ ದೂರಿನ ಮೇರೆಗೆ ಮಡಿಕೇರಿಯ ಸಿಇಎನ್‌ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ರಸ್ತೆ ಅಪಘಾತ, ಓರ್ವನ ಮೃತ್ಯು

ದಿನಾಂಕ 26/10/2021ರಂದು ಗೋಣಿಕೊಪ್ಪದ ಕಾಲ್ಸ್‌ ವಿದ್ಯಾ ಸಂಸ್ಥೆಯಲ್ಲಿ ಬಸ್‌ ಚಾಲಕನಾಗಿ ಕೆಲಸ ಮಾಡಿಕೊಂಡಿರುವ ಚಂದ್ರ ಎಂಬವರು ಶಾಲಾ ವಾಹನವನ್ನು ಚಾಲಿಸಿಕೊಂಡು ಕಾನೂರಿನಿಂದ ಕೋತೂರು ಮಾರ್ಗವಾಗಿ ಬರುತ್ತಿದ್ದಾಗ ಕೋತೂರಿನಲ್ಲಿ ಕುಟ್ಟ ಕಡೆಯಿಂದ ಒಂದು ಬೈಕನ್ನು ಅದರ ಚಾಲಕ ನಾಲ್ಕೇರಿಯ ಆದಿತ್ಯ ಎಂಬವರು ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಾಲಿಸಿಕೊಂಡು  ಬಂದು ಚಂದ್ರವರು ಚಾಲಿಸುತ್ತಿದ್ದ ಶಾಲಾ ವಾಹನಕ್ಕೆ ಡಿಕ್ಕಿಪಡಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ಬೈಕ್‌ ಸವಾರ ಆದಿತ್ಯರವರು ಮೃತರಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಕುಟ್ಟ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 27-10-2021 03:37 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080