ಅಭಿಪ್ರಾಯ / ಸಲಹೆಗಳು

ಮನೆಕಳ್ಳತನ ಪ್ರಕರಣ ಪತ್ತೆ; ಆರೋಪಿ ಬಂಧನ

ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮನೆಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸೋಮವಾರಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಅಕ್ಟೋಬರ್, 2020 ರ ಕೊನೆ ವಾರದಲ್ಲಿ ಸೋಮವಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಬಿಳಕಿಕೊಪ್ಪ ಗ್ರಾಮದಲ್ಲಿ ನಡೆದ ಮನೆಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಕಲೆಹಾಕಿದ ಸೋಮವಾರಪೇಟೆ ಪೊಲೀಸರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್‌ ತಾಲೂಕಿನ ಚಂದಾಪುರ ನಿವಾಸಿಯಾದ ಸುರೇಶ ಎಂಬುವನನ್ನು ಕರೆತಂದು ವಿಚಾರಣೆಗೊಳಪಡಿಸಲಾಗಿ, ಆರೋಪಿ ಮನೆಗಳ್ಳತನ ಮಾಡಿರುವ ಬಗ್ಗೆ ವಿಚಾರಣೆಯ ವೇಳೆ ತಿಳಿದುಬಂದಿರುತ್ತದೆ. ಸದರಿ ಆರೋಪಿಯನ್ನು ದಸ್ತಗಿರಿ ಮಾಡಲಾಗಿದ್ದು ಆತನಿಂದ ಸುಮಾರು ರೂ. 13,35,000/- ಮೌಲ್ಯದ ಒಟ್ಟು 285 ಗ್ರಾಂ ಚಿನ್ನಾಭರಣಗಳು, ಒಂದು ಯಮಹಾ ಬೈಕು ಸೇರಿದಂತೆ ರೂ. 70,000/-  ನಗದನ್ನು ವಶಪಡಿಸಿಕೊಳ್ಳಲಾಗಿದೆ.

ಅಲ್ಲದೇ ದಸ್ತಗಿರಿಯಾದ ಆರೋಪಿಯು ಈ ಹಿಂದೆ ಶಿವಮೊಗ್ಗ ಜಿಲ್ಲೆ, ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ 8 ಮನೆಕಳವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿರುತ್ತದೆ.

ಸದರಿ ಪ್ರಕರಣವನ್ನು ಪೊಲೀಸ್ ಅಧೀಕ್ಷಕರು,  ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್‌ಪಿ ಹೆಚ್. ಎಂ. ಶೈಲೇಂದ್ರರವರ ಮಾರ್ಗದರ್ಶನದಲ್ಲಿ ಸೋಮವಾರಪೇಟೆ ಪೊಲೀಸ್ ವೃತ್ತ ನಿರೀಕ್ಷಕರಾದ ಮಹೇಶ್ ಬಿ.ಜಿ. ಮತ್ತು ಸೋಮವಾರಪೇಟೆ ಠಾಣಾ ಉಪ ನಿರೀಕ್ಷಕರಾದ  ಎಂ.ಸಿ.ಶ್ರೀಧರ್, ವಿರೂಪಾಕ್ಷ,  ಶನಿವಾರಸಂತೆ ಠಾಣಾ ಉಪನಿರೀಕ್ಷಕರಾದ ದೇವರಾಜು ಹೆಚ್.ಈ ಹಾಗೂ ಶನಿವಾರಸಂತೆ ಠಾಣಾ ಸಿಬ್ಬಂದಿಗಳಾದ ಮುರಳಿ, ಲೋಕೇಶ್, ಹರೀಶ್.ಶ್ರೀ.ಪ್ರದೀಪ್, ಡಿಂಪಲ್, ಸೋಮವಾರಪೇಟೆ ಠಾಣಾ ಸಿಬ್ಬಂದಿಗಳಾದ   ಶಿವಕುಮಾರ್, ಪ್ರವೀಣ, ಅನಂತ ಕುಮಾರ್, ಮಂಜುನಾಥ, ಕುಮಾರ ಸ್ವಾಮಿ, ನಡಾಫ್, ಮಧು, ಜಗಧೀಶ್, ನವೀನ್ ಕುಮಾರ್, ಹರ್ಷಿತ್ ಮತ್ತು ಸೋಮವಾರಪೇಟೆ ಉಪ ವಿಭಾಗದ ಅಪರಾಧ ಪತ್ತೆ ಸಿಬ್ಬಂದಿಯವರಾದ ದಯಾನಂದ, ಸಜಿ, ಪ್ರಕಾಶ ಮತ್ತು ತಾಂತ್ರಿಕ ವಿಭಾಗದ ಸಿಬ್ಬಂದಿಯವರಾದ ರಾಜೇಶ್ ಮತ್ತು ಗಿರೀಶ್ ರವರುಗಳು  ಪತ್ತೆ ಹಚ್ಚಿರುತ್ತಾರೆ.

 ಕೊಡಗು ಜಿಲ್ಲೆಯ ಸಾರ್ವಜನಿಕರು ತಾವು ಮನೆಬಿಟ್ಟು ತೆರಳುವ ವೇಳೆ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಹಾಗೂ ಬೆಲೆಬಾಳುವ ವಸ್ತುಗಳನ್ನು ಮನೆಯಲ್ಲಿಟ್ಟುಕೊಳ್ಳದೇ, ಬ್ಯಾಂಕ್ ಲಾಕರ್ಗಳಲ್ಲಿ ಸುರಕ್ಷಿತವಾಗಿ ಇಡುವುದರೊಂದಿಗೆ ಮನೆಗಳ್ಳತನವನ್ನು ತಡೆಗಟ್ಟುವಲ್ಲಿ ಪೊಲೀಸರೊಂದಿಗೆ ಸಹಕರಿಸಬೇಕೆಂದು ಕೋರಲಾಗಿದೆ.

ಇತ್ತೀಚಿನ ನವೀಕರಣ​ : 27-11-2020 05:08 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080