ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ

ದಿನಾಂಕ 26/11/2021ರಂದು ಕೇರಳದ ಕಣ್ಣೂರು ನಗರ ಪೊಲೀಸ್‌ ಠಾಣೆಯ ಪಿಎಸ್‌ಐ ನಸೀಬ್‌ ಸಿ.ಹೆಚ್.‌ ಎಂಬವರು ಅವರ ಠಾಣೆಯ ಪ್ರಕರಣವೊಂದರ ಆರೋಪಿ ಕಣ್ಣೂರಿನ ಪಯ್ಯಂಬಲ್‌ ನಿವಾಸಿ ಉಮ್ಮರ್‌ ಕುಟ್ಟಿ ಎಂಬಾತನ ಪತ್ತೆ ಕರ್ತವ್ಯದ ಮೇರೆಗೆ ವಿರಾಜಪೇಟೆ ನಗರಕ್ಕೆ ಬಂದಿದ್ದಾಗ ಆರೋಪಿ ಉಮ್ಮರ್‌ ಕುಟ್ಟಿಯು ನಸೀಬ್‌ ಸಿ.ಹೆಚ್‌ರವರನ್ನು ಕಂಡು ಕಾರಿನಲ್ಲಿ ತಪ್ಪಿಸಿಕೊಳ್ಳುವ ಯತ್ನದಲ್ಲಿ ಅತಿ ವೇಗ ಮತ್ತು ಅಜಾಗರೂಕತೆಯಿಂದ ಕಾರನ್ನು ಚಾಲಿಸಿ ಆತನ ಕಾರನ್ನು ಬೇರೆ ಯಾವುದೋ ವಾಹನಕ್ಕೆ ಡಿಕ್ಕಿಪಡಿಸಿದ ಪರಿಣಾಮ  ಆರೋಪಿ ಉಮ್ಮರ್‌ ಕುಟ್ಟಿಯ ಕಾರಿಗೆ ಹಾನಿಯುಂಟಾಗಿರುವುದಾಗಿ ನೀಡಿದ ದೂರಿನ ಮೇರೆಗೆ ವಿರಾಜಪೇಟೆ ನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ರಸ್ತೆ ಅಪಘಾತ

ದಿನಾಂಕ 26/11/2021ರಂದು ಗೋಣಿಕೊಪ್ಪ ಬಳಿಯ ಬಾಳಾಜಿ ಗ್ರಾಮದ ಚೆನ್ನಂಗೊಲ್ಲಿ ಪೈಸಾರಿ ನಿವಾಸಿ ಕುಂಞಿ ಮೋನು ಎಂಬವರು ಅವರ ಬೈಕಿನಲ್ಲಿ ಗೋಣಿಕೊಪ್ಪದಿಂದ ಮನೆಗೆ ಹೋಗುತ್ತಿರುವಾಗ ಹರಿಶ್ಚಂದ್ರಪುರದ ಬಳಿ ಎದುರಿನಿಂದ ಒಂದು ಬೈಕನ್ನು ಅದರ ಸವಾರ ನಿತಿನ್‌ ಎಂಬವರು ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಾಲಿಸಿಕೊಂಡು ಬಂದು ಕುಂಞಿ ಮೋನುರವರ ಬೈಕಿಗೆ ಡಿಕ್ಕಿಪಡಿಸಿದ ಪರಿಣಾಮ ಕುಂಞಿ ಮೋನುರವರಿಗೆ ಗಾಯಗಳಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಗೋಣಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 27-11-2021 12:51 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080