ಅಭಿಪ್ರಾಯ / ಸಲಹೆಗಳು

ಹಲ್ಲೆ ಪ್ರಕರಣ

ದಿನಾಂಕ 28/05/2021ರಂದು ಶ್ರೀಮಂಗಲ ಬಳಿಯ ಬೆಳ್ಳೂರು ಗ್ರಾಮದ ಹೊಸ್ಕೇರಿ ಪೈಸಾರಿ ನಿವಾಸಿ ಶೋಭಾ ಎಂಬವರು ಸಂಜೆ ವೇಳೆ ಮನೆಯಲ್ಲಿರುವಾಗ ಅಲ್ಲಿಗೆ ಬಂದ ಹೆಮ್ಮಾಡು ಪೈಸಾರಿಯ ನಿವಾಸಿಗಳಾದ ಕೃಷ್ಣಪ್ಪ, ಕೀರ್ತನ್‌ ಮತ್ತು ಇತರೆ ಎಂಟು ಜನರು ಹಳೆ ದ್ವೇಷದಿಂದ ಶೋಭಾರವರೊದಿಗೆ ಜಗಳವಾಡಿ ದೊಣ್ಣೆಯಿಂದ ಶೋಭಾರವರ ಮೇಲೆ ಹೊಡೆದು ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿರುವುದಾಗಿ ನೀಡಿದ ದೂರಿನ ಮೇರೆಗೆ ಶ್ರೀಮಂಗಲ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಕೋವಿಡ್‌ ನಿಯಮ ಉಲ್ಲಂಘನೆ ಪ್ರಕರಣ

ದಿನಾಂಕ 28/05/2021ರಂದು ಮಡಿಕೇರಿ ನಗರದ ಕಾಲೇಜು ರಸ್ತೆಯ ಆರ್ಮಿ ಕ್ಯಾಂಟೀನ್‌ ಹಲವಾರು ಅಪರಿಚಿತ ಜನರು ಗುಂಪು ಸೇರಿದ್ದು ಜಿಲ್ಲೆಯಲ್ಲಿ ಜಾರಿಯಲ್ಲಿರುವ ಕೋವಿಡ್‌-19ರ ಮಾರ್ಗಸೂಚಿಯನ್ನು ಉಲ್ಲಂಘಿಸಿರುವುದಾಗಿ ಮಡಿಕೇರಿ ನಗರ ಸಭೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಸೌಮ್ಯರವರು ನೀಡಿದ ದೂರಿನ ಮೇರೆಗೆ ಮಡಿಕೇರಿ ನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಹಲ್ಲೆ ಪ್ರಕರಣ

ದಿನಾಂಕ 28/05/2021ರಂದು ಕುಶಾಲನಗರ ಬಳಿಯ ಭುವನಗಿರಿ ಗ್ರಾಮದ ನಿವಾಸಿ ಪ್ರಸನ್ನಕುಮಾರ್‌ರವರು ಅವರ ಹಸುವನ್ನು ಹೊಡೆದುಕೊಂಡು ಮನೆಗೆ ಬರುತ್ತಿರುವಾಗ ಅವರ ಮನೆಯ ಮುಂದೆ ಕಾಳಮ್ಮ ಎಂಬವರೊಂದಿಗೆ ಭುವನಗಿರಿ ಗ್ರಾಮದ ಅನಿಲ್‌ ಎಂಬಾತನು ಜಗಳವಾಡುತ್ತಿದ್ದುದನ್ನು ಪ್ರಶ್ನಿಸಿದ ಪ್ರಸನ್ನ ಕುಮಾರ್‌ರವರ ಮೇಲೆ ಅನಿಲ್‌ ಕಲ್ಲಿನಿಂದ ಹೊಡೆದು ಹಲ್ಲೆ ಮಾಡಿರುವುದಾಗಿ ದೂರು ನೀಡಿದ್ದು ಅದೇ ರೀತಿ ಅನಿಲ್‌ರವರ ಪತ್ನಿಯ ಜೊತೆ ಜಗಳವಾಡುತ್ತಿದ್ದ ಪ್ರಸನ್ನ ಕುಮಾರ್‌ವರನ್ನು ಪ್ರಶ್ನಿಸಿದ ಕಾರಣಕ್ಕೆ ಪ್ರಸನ್ನ ಕುಮಾರ್‌ ಅನಿಲ್‌ರವರೊಂದಿಗೆ ಜಗಳವಾಡಿ ಚಾಕುವಿನಿಂದ ಅನಿಲ್‌ರವರ ಕೈಗೆ ಇರಿದು ಗಾಯಗೊಳಿಸಿರುವುದಾಗಿ ಅನಿಲ್‌ ಸಹಾ ಪ್ರತಿ ದೂರು ನೀಡಿದ್ದು ಕುಶಾಲನಗರ ಗ್ರಾಮಾಂತರ ಪೊಲೀಸರು ಎರಡೂ ದೂರುಗಳನ್ನು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 29-05-2021 01:04 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080