ಅಭಿಪ್ರಾಯ / ಸಲಹೆಗಳು

ಕಳವು ಪ್ರಕರಣ

            ದಿನಾಂಕ: 05-08-2020 ರಿಂದ 03-12-2020 ರ ನಡುವಿನ ಅವಧಿಯಲ್ಲಿ ಪೊನ್ನಂಪೇಟೆ ತಾಲ್ಲೂಕು ದೇವನೂರು ಗ್ರಾಮದ ಮನೆಯೊಂದರ ಹಂಚನ್ನು ಯಾರೋ ಕಳ್ಳರು ತೆಗೆದು ಒಳನುಗ್ಗಿ ಪೆಟ್ಟಿಗೆಯೊಳಗೆ ಇಟ್ಟಿದ್ದ 50,000 ನಗದು ಹಣವನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ಸತೀಶ ಎಂಬುವವರು ನೀಡಿದ ಪುಕಾರಿನ ಮೇರೆ ಪೊನ್ನಂಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ರಸ್ತೆ ಅಪಘಾತ ಪ್ರಕರಣ

            ದಿನಾಂಕ: 03-11-2020 ರಂದು ಪೊನ್ನಂಪೇಟೆ ತಾಲ್ಲೂಕು ಗೋಣಿಕೊಪ್ಪ ಗ್ರಾಮದ ಪಾಲಿಬೆಟ್ಟ ರಸ್ತೆಯಲ್ಲಿ ಕೆಎ-12-ಬಿ-6682 ರ ಆಟೋ ರಿಕ್ಷಾವನ್ನು ಅದರ ಚಾಲಕ ಅತಿವೇಗ ಮತ್ತುಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ಬದಿಯಲ್ಲಿ ಆಟವಾಡುತ್ತಿದ್ದ ಗಿರಿರಾಜ್‍ ಎಂಬುವವರ ಮಗನಿಗೆ ಡಿಕ್ಕಿಪಡಿಸಿದ ಪರಿಣಾಮ ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಹಲ್ಲೆ ಪ್ರಕರಣ

ದಿನಾಂಕ: 03-12-2020 ರಂದು ವಿರಾಜಪೇಟೆ ತಾಲ್ಲೂಕು ತಿತಿಮತಿ ಗ್ರಾಮದ ನಿವಾಸಿ ರಾಚಯ್ಯ ಎಂಬುವವರಿಗೆ ಅದೇ ಗ್ರಾಮದ ನಿವಾಸಿಗಳಾದ ಸಿದ್ದರಾಜು ಮತ್ತು ಅರುಣ ಎಂಬುವವರು ಹಣದ ವಿಚಾರದಲ್ಲಿ ವೈಷಮ್ಯದಿಂದ ಜಗಳ ಮಾಡಿ ಹಲ್ಲೆ ಮಾಡಿ ಗಾಯಪಡಿಸಿ ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಅಕ್ರಮ ಮದ್ಯ ಮಾರಾಟ ಪ್ರಕರಣ

                ದಿನಾಂಕ: 03-12-2020 ರಂದು ಸೋಮವಾರಪೇಟೆ ತಾಲ್ಲೂಕು ಚಿಕ್ಕಬೆಟ್ಟಗೇರಿ  ಗ್ರಾಮದ  ನಿವಾಸಿ ಚಂದ್ರಶೇಖರ್ ಎಂಬುವವರು ಅವರ ಮನೆಯ ಮುಂದಿನ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಇಟ್ಟುಕೊಂಡುಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಮಾಡುತ್ತಿದ್ದ ಪ್ರಕರಣವನ್ನು ಕುಶಾಲನಗರ ಗ್ರಾಮಾಂತರ ಠಾಣೆ ಪೊಲಿಸರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ಕಳವು ಪ್ರಕರಣ

                ದಿನಾಂಕ: 01-12-2020 ರಿಂದ 03-12-2020 ರ ನಡುವಿನ ಅವಧಿಯಲ್ಲಿ ಮಡಿಕೇರಿ ತಾಲ್ಲೂಕು ಬೆಟ್ಟಗೇರಿ ಗ್ರಾಮದ ನಿವಾಸಿ ಅಯ್ಯಪ್ಪ ಎಂಬುವವರ ಕೊಟ್ಟಿಗೆಯಿಂದ 35,000 ರು ಬೆಲೆಯ ಎರಡು ದನಗಳನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಇತ್ತೀಚಿನ ನವೀಕರಣ​ : 04-12-2020 07:02 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080