ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 09-06-2021 ರಂದು ಸೋಮವಾರಪೇಟೆ ತಾಲ್ಲೂಕು ಬಾಳುಗೋಡು ರಸೂಲ್‌ ಪುರ ಗ್ರಾಮದ ಬಳಿ ಹೆದ್ದಾರಿ ರಸ್ತೆಯಲ್ಲಿ ಕೆಎ-12-ಆರ್-4382‌ ರ ಬಜಾಜ್‌ ಪಲ್ಸಾರ್‌ ಬೈಕನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿದ್ದರಿಂದ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ಎದುರುಗಡೆಯಯಿಂದ ಬರುತ್ತಿದ್ದ ಕೆಎ-12ಬಿ-4250 ರ ಪಿಕ್‌ ಅಪ್‌ ವಾಹನಕ್ಕೆ ಡಿಕ್ಕಿಯಾಗಿದ್ದರಿಂದ ಮೂವರು ಸವಾರರು ಗಾಯಗೊಂಡಿದ್ದು ಈ ಬಗ್ಗೆ ಪಿಕ್‌ ಅಪ್‌ ವಾಹನ ಚಾಲಕ ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಅಕ್ರಮ ಮದ್ಯ ಮಾರಾಟ

            ದಿನಾಂಕ: 09-06-2021 ರಂದು ಸೋಮವಾರಪೇಟೆ ತಾಲ್ಲೂಕು‌ ನಗರೂರು ಗ್ರಾಮದ ನಿವಾಸಿ ಶಿವಕುಮಾರ ಎಂಬುವವರು ಅವರ ಮನೆಯಲ್ಲಿ ಅಕ್ರಮವಾಗಿ ಸಾರ್ವಜನಿಕರಿಗೆ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಸೋಮವಾರಪೇಟೆ ಠಾಣೆ ಪಿಎಸ್‌ಐ ಶ್ರೀಧರ್‌ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ಲಾಕ್‌ ಡೌನ್‌ ನಿಯಮ ಉಲ್ಲಂಘನೆ ಪ್ರಕರಣ

                ದಿನಾಂಕ: 09.06.2021  ರಂದು ಸೋಮವಾರಪೇಟೆ ತಾಲ್ಲೂಕು  ಹಾನಗಲ್ಲು ಗ್ರಾಮದ  ನಿವಾಸಿಗಳಾದ ರಘು, ರಂಜಿತ್‌, ಸುಭಾಷ್‌, ದರ್ಶನ್‌, ಮಧು ಎಂಬುವವರು ಗುಂಪು ಕಟ್ಟಿಕೊಂಡು ಸಾಮಾಜಿಕ ಅಂತರ ಪಾಲನೆ ಮಾಡದೇ ಕೋವಿಡ್-‌19 ಸಾಂಕ್ರಾಮಿಕ ರೋಗ ಹರಡುವ ಸಂಭವವಿದ್ದರೂ ಸಹಾ ಕೋವಿಡ್‍-19 ಸಾಂಕ್ರಾಮಿಕ ರೋಗ ಹರಡುವಿಕೆ ತಡೆಗಟ್ಟಲು ಸರ್ಕಾರ ನಿಗದಿಪಡಿಸಿರುವ ಮಾರ್ಗಸೂಚಿ ಉಲ್ಲಂಘಿಸಿದ್ದು ಈ ಬಗ್ಗೆ ಪಂಚಾಯಿತಿ ಅಧಿಕಾರಿಗಳು ಪರಿಶೀಲಿಸಿ ನೀಡಿದ ವರದಿ ಮೇರೆ  ಸೋಮವಾರಪೇಟೆ  ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಮರಳು ಸಾಗಾಟ ಪ್ರಕರಣ

            ದಿನಾಂಕ: 09-06-2021 ರಂದು ವಿರಾಜಪೇಟೆ ತಾಲ್ಲೂಕು ಬಿಟ್ಟಂಗಾಲ ಗ್ರಾಮದ ನಿವಾಸಿ ಪಪ್ಪು ಎಂಬುವವರು ಗ್ರಾಮದ ಬಳಿ ಹೊಳೆಯಿಂದ ಅಕ್ರಮವಾಗಿ ಮರಳನ್ನು ತೆಗೆದು ಪಿಕ್‌ ಅಪ್‌ ವಾಹನ ಸಂಖ್ಯೆ ಕೆಎ-13-6479 ರಲ್ಲಿ ತುಂಬಿಸಿಕೊಂಡು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ವಿರಾಜಪೇಟೆ ಗ್ರಾಮಾಂತರ ಠಾಣೆ ಪಿಎಸ್‌ಐ ಸಿದ್ದಲಿಂಗ ಬಾನಸೆ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 10-06-2021 05:45 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ