ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ

ದಿನಾಂಕ 13/05/2022 ರಂದು ಸುಂಟಿಕೊಪ್ಪ ಬಳಿಯ 7ನೇ ಮೈಲು ನಿವಾಸಿ ಜೆ.ಎ.ಉತ್ತಪ್ಪ ಎಂಬವರು ಮನೆಯಲ್ಲಿರುವಾಗ ಮೈಸೂರಿನ ಟಿ.ರಾಝು ಎಂಬವರು ಒಂದು ಲಾರಿಯಲ್ಲಿ  ಹೆಚ್‌.ಪಿ ಗ್ಯಾಸ್‌ ಕಂಪೆನಿಯ ಖಾಲಿ ಸಿಲಿಂಡರುಗಳನ್ನು ತುಂಬಿಸಿಕೊಂಡು  ಲಾರಿಯನ್ನು 7ನೇ ಮೈಲಿನ ಹೆದ್ದಾರಿಯ ಇಳಿಜಾರಿನಲ್ಲಿ ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಾಲಿಸಿಕೊಂಡು ಬಂದ ಪರಿಣಾಮ ತಿರುವಿನಲ್ಲಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಮಗುಚಿಕೊಂಡಿರುವುದಾಗಿ ನೀಡಿದ ದೂರಿನ ಮೇರೆಗೆ ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಹಲ್ಲೆ ಪ್ರಕರಣ

ದಿನಾಂಕ 13/05/2022ರಂದು ಶನಿವಾರಸಂತೆ ಬಳಿಯ ನಂದಿಗುಂದ ನಿವಾಸಿ ರವಿಚಂದ್ರನ್‌ ಎಂಬವರು ಅವರ ಸ್ನೇಹಿತ ಅಭಿಷೇಕ್‌ ಎಂಬವರೊಂದಿಗೆ ಕಾರಿನಲ್ಲಿ ಶನಿವಾರಸಂತೆ ಕಡೆಗೆ ಬರುತ್ತಿರುವಾಗ ದಾರಿಯಲ್ಲಿ ಎಳನೀರುಗುಂಡಿ ಗ್ರಾಮದ ಬಳಿ ಮಾದೇಗೋಡು ನಿವಾಸಿ ದಯಾ ಎಂಬವರು ಕಾರನ್ನು ಅಡ್ಡಗಟ್ಟಿ ದೇವಸ್ಥಾನದಲ್ಲಿ ಪರಸ್ಪರ ಮಾತು ಬೆಳೆದ ವಿಚಾರದಲ್ಲಿ ಜಗಳವಾಡಿ ರವಿಚಂದ್ರನ್‌ರವರಿಗೆ ಚಾಕುವಿನಿಂದ ಚುಚ್ಚಿ ಹಲ್ಲೆ ಮಾಡಿದ್ದು ತಡೆಯಲು ಬಂದ ಅಭಿಷೇಕ್‌ರವರಿಗೂ ಚಾಕುವಿನಿಂದ ಹಲ್ಲೆ ಮಾಡಿರುವುದಾಗಿ ನೀಡಿದ ದೂರಿನ ಮೇರೆಗೆ ಶನಿವಾರಸಂತೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ವ್ಯಕ್ತಿ ಕಾಣೆ ಪ್ರಕರಣ

ಮಡಿಕೇರಿ ಬಳಿಯ ಕರ್ಣಂಗೇರಿ ನಿವಾಸಿ ಚೈತನ್ಯ ಎಂಬವರ ಪತಿ ಪ್ರವೀಣ್‌ ಕುಮಾರ್‌ ಎಂಬವರು ದಿನಾಂಕ 11/05/2022ರಂದು ಮರ ಕುಯ್ಯುವ ಯಂತ್ರ ತರಲೆಂದು ಮನೆಯಿಂದ ಹೋದವರು ಇದುವರೆಗೂ ಮರಳಿ ಬಾರದೆ ಕಾಣೆಯಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಮಡಿಕೇರಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

 

ಬಾಲ ಕಾರ್ಮಿಕನ ರಕ್ಷಣೆ

ಕೊಡಗು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಯಿಂದ ಬಂದ ದೂರಿನ ಅನ್ವಯ ಮಡಿಕೇರಿಯ ಜಿಲ್ಲಾ ಮಕ್ಕಳ ವಿಶೇಷ ಪೊಲೀಸ್‌ ಘಟಕ, ಕಾರ್ಮಿಕ ಇಲಾಖೆ, ಕಂದಾಯ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಅಧಿಕಾರಿಗಳು   ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಒಂಟಿಯಂಗಡಿ ಹಾಗೂ ಕಣ್ಣಂಗಾಲ ಗ್ರಾಮಗಳ ವ್ಯಾಪ್ತಿಯಲ್ಲಿರುವ ಕಾಫಿ ತೋಟಗಳಲ್ಲಿ ಕಾರ್ಮಿಕ ಕಾಯ್ದೆಯಡಿ ತಪಾಸಣೆಯನ್ನು ನಡೆಸಿ ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಧೆಯ ಓರ್ವ ಬಾಲ ಕಾರ್ಮಿಕನನ್ನು ರಕ್ಷಿಸಿ ಬಾಲಕನ ಪೋಷಣೆ ಹಾಗೂ ರಕ್ಷಣೆಯ ಉದ್ದೇಶದಿಂದ ಸರ್ಕಾರಿ ಬಾಲಮಂದಿರದಲ್ಲಿ ಪುನರ್ವಸತಿ ವ್ಯವಸ್ಥೆ ಮಾಡಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 14-05-2022 11:53 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080