ಅಭಿಪ್ರಾಯ / ಸಲಹೆಗಳು

ವ್ಯಕ್ತಿ ನಾಪತ್ತೆ ಪ್ರಕರಣ

ಶ್ರೀಮಂಗಲ ಬಳಿಯ ವೆಸ್ಟ್‌ ನೆಮ್ಮಲೆ ಗ್ರಾಮದ ನಿವಾಸಿ ಕಾಳಿಮಾಡ ಕಿರಣ್‌ ಎಂಬವರ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದ ಮಣಿ ಎಂಬ ಕಾರ್ಮಿಕನು ದಿನಾಂಕ 20/05/2022ರಿಂದ ಮನೆಯಲ್ಲಿಲ್ಲದೆ ಎಲ್ಲಿಗೋ ಹೋಗಿ ಕಾಣೆಯಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಶ್ರೀಮಂಗಲ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಅಕ್ರಮ ಮದ್ಯ ಮಾರಾಟ ಪ್ರಕರಣ

ದಿನಾಂಕ 22/05/2022ರಂದು ನಾಪೋಕ್ಲು ಠಾಣೆಯ ಪಿಎಸ್‌ಐ ಸದಾಶಿವರವರು ಗಸ್ತು ಕರ್ತವ್ಯದಲ್ಲಿರುವಾಗ ಕಿರುಂದಾಡು ಗ್ರಾಮದಲ್ಲಿ ಬಾದಮಂಡ ಪೊನ್ನಪ್ಪ ಯಾನೆ ರಘು ಎಂಬವರು ಅವರ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದಾಗಿ ದೊರೆತ ಸುಳಿವಿನ ಮೇರೆಗೆ ಪಿಎಸ್‌ಐ ಸದಾಶಿವರವರು ಸ್ಥಳಕ್ಕೆ ತೆರಳಿ ಬಾದಮಂಡ ಪೊನ್ನಪ್ಪ ಯಾನೆ ರಘುರವರು ಅವರ ಅಂಗಡಿಯಲ್ಲಿ ಸರ್ಕಾರದ ಪರವಾನಗಿ ಇಲ್ಲದೆ ಮಾರಾಟ ಮಾಡಲು ಇಟ್ಟಿದ್ದ 90ಎಂಎಲ್‌ನ ಸುಮಾರು 35 ಪ್ಯಾಕೆಟು ಮದ್ಯವನ್ನು ವಶಪಡಿಸಿಕೊಂಡು ನಾಪೋಕ್ಲು ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಅಕ್ರಮ ಮದ್ಯ ಮಾರಾಟ ಪ್ರಕರಣ

ದಿನಾಂಕ 22/05/2022ರಂದು ನಾಪೋಕ್ಲು ಠಾಣೆಯ ಪಿಎಸ್‌ಐ ಸದಾಶಿವರವರು ಗಸ್ತು ಕರ್ತವ್ಯದಲ್ಲಿರುವಾಗ ಕಿರುಂದಾಡು ಗ್ರಾಮದಲ್ಲಿ ಖಾದರ್ ಎಂಬವರು ಅವರ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದಾಗಿ ದೊರೆತ ಸುಳಿವಿನ ಮೇರೆಗೆ ಪಿಎಸ್‌ಐ ಸದಾಶಿವರವರು ಸ್ಥಳಕ್ಕೆ ತೆರಳಿ ಖಾದರ್‌ರವರು ಅವರ ಅಂಗಡಿಯಲ್ಲಿ ಸರ್ಕಾರದ ಪರವಾನಗಿ ಇಲ್ಲದೆ ಮಾರಾಟ ಮಾಡಲು ಇಟ್ಟಿದ್ದ 90ಎಂಎಲ್‌ನ ಸುಮಾರು 34 ಪ್ಯಾಕೆಟು ಮದ್ಯವನ್ನು ವಶಪಡಿಸಿಕೊಂಡು ನಾಪೋಕ್ಲು ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಅಕ್ರಮ ಮದ್ಯ ಮಾರಾಟ ಪ್ರಕರಣ

ದಿನಾಂಕ 22/05/2022ರಂದು ಶನಿವಾರಸಂತೆ ಬಳಿಯ ಮಾಲಂಬಿ ಗ್ರಾಮದ ನಿವಾಸಿ ರಾಮಚಂದ್ರ ಎಂಬವರು ಅವರ ಶೆಡ್‌ನಲ್ಲಿ ಸರ್ಕಾರದ ಪರವಾನಗಿ ಇಲ್ಲದೆ ಸಾರ್ವಜನಿಕರು ಮದ್ಯಪಾನ ಮಾಡಲು ಅನುವು ಮಾಡಿಕೊಟ್ಟಿರುವ ಬಗ್ಗೆ ದೊರೆತ ದೂರಿನ ಮೇರೆಗೆ ಶನಿವಾರಸಂತೆ ಠಾಣೆಯ ಪಿಎಸ್‌ಐ ಗೋವಿಂದರಾಜುರವರು ಸ್ಥಳಕ್ಕೆ ತೆರಳಿದಾಗ ಅಲ್ಲಿ ರಾಮಚಂದ್ರರವರು ಸಾರ್ವಜನಿಕರಿಗೆ ಅಕ್ರಮವಾಗಿ ಮದ್ಯಪಾನ ಮಾಡಲು ಅನುವು ಮಾಡಿಕೊಟ್ಟಿರುವದು ಕಂಡು ಬಂದಿದ್ದು ಅಲ್ಲಿದ್ದ ಮದ್ಯವನ್ನು ವಶಪಡಿಸಿಕೊಂಡು ಶನಿವಾರಸಂತೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಹಲ್ಲೆ ಪ್ರಕರಣ

ದಿನಾಂಕ 21/05/2022ರಂದು ಗೋಣಿಕೊಪ್ಪ ನಿವಾಸಿ ಗಿರೀಶ್‌ ಎಂಬವರೊಂದಿಗೆ ಅಯ್ಯಪ್ಪ ದೇವಸ್ಥಾನ ಬಳಿಯ ನಿವಾಸಿ ಪ್ರಶಾಂತ್‌ ಎಂಬಾತನು ಕ್ಷುಲ್ಲಕ ಕಾರಣಕ್ಕೆ ಜಗಳವಾಡಿ ಚಾಕುವಿನಿಂದ ಗಿರೀಶ್‌ರವರಿಗೆ ಚುಚ್ಚಿ ಗಾಯಗೊಳಿಸಿರುವುದಾಗಿ ನೀಡಿದ ದೂರಿನ ಮೇರೆಗೆ ಪೊನ್ನಂಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 23-05-2022 03:43 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080