ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ

ದಿನಾಂಕ 24/02/2021ರಂದು ಸೋಮವಾರಪೇಟೆ ಬಳಿಯ ಎರೆಪಾರೆ ಗ್ರಾಮದ ನಿವಾಸಿ ಬಿ.ಜಿ.ಹರೀಶ್‌ ಎಂಬವರು ಗ್ರಾಮದ ಸಾರ್ವಜನಿಕ ಬಸ್‌ ನಿಲ್ಲುವ ಸ್ಥಳದಲ್ಲಿ ಅಕ್ರಮವಾಗಿ ಸರ್ಕಾರದ ಪರವಾನಿಗೆ ಇಲ್ಲದೆ ಸಾರ್ವಜನಿಕರಿಗೆ ಮದ್ಯಪಾನ ಮಾಡಲು ಅವಕಾಶ ಮಾಡಿಕೊಡುತ್ತಿರುವುದಾಗಿ ದೊರೆತ ಸುಳಿವಿನ ಮೇರೆಗೆ ಸೋಮವಾರಪೇಟೆ ವೃತ್ತ ನಿರೀಕ್ಷಕರಾದ ಬಿ.ಜಿ.ಮಹೇಶ್‌ರವರು ಸ್ಥಳಕ್ಕೆ ತೆರಳಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಬಿ.ಜಿ.ಹರೀಶ್‌ನನ್ನು ಬಂಧಿಸಿ ಸೋಮವಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಅಕ್ರಮ ಲಾಟರಿ ಮಾರಾಟ ಪ್ರಕರಣ

ದಿನಾಂಕ 24/02/2021ರಂದು ಸುಂಟಿಕೊಪ್ಪ ಬಳಿಯ 7ನೇ ಹೊಸಕೋಟೆ ಗ್ರಾಮದ ತೊಂಡೂರು ಬಳಿ ಕರ್ನಾಟಕದಲ್ಲಿ ನಿಷೇಧಿಸಲಾದ ಕೇರಳ ರಾಜ್ಯದ ಲಾಟರಿ ಟಿಕಿಟುಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವುದಾಗಿ ದೊರೆತ ಮಾಹಿತಿಯ ಮೇರೆಗೆ ಕುಶಾಲನಗರ ವೃತ್ತ ನಿರೀಕ್ಷಕರಾದ ಎಂ. ಮಹೇಶ್‌ರವರು ಸ್ಥಳಕ್ಕೆ ತೆರಳಿ ಅಕ್ರಮವಾಗಿ ಲಾಟರಿ ಟಿಕೆಟು ಮಾರಾಟ ಮಾಡುತ್ತಿದ್ದ ಮುಸ್ತಫಾ ಎಂಬ ವ್ಯಕ್ತಿಯನ್ನು ಬಂಧಿಸಿ ಸುಂಟಿಕೊಪ್ಪ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಕೊಲೆ ಯತ್ನ ಪ್ರಕರಣ

ದಿನಾಂಕ 23/02/2021ರಂದು ರಾತ್ರಿ ವೇಳೆ ಕುಶಾಲನಗರದ ಗೊಂದಿಬಸವನಹಳ್ಳಿ ನಿವಾಸಿ ನವೀನ ಎಂಬವರಿಗೆ ಮುಳ್ಳುಸೋಗೆಯ ಸಾಗರ್‌ ಎಂಬಾತನು ಕರೆ ಮಾಡಿ ನವೀನ್‌ರವರ ತಂದೆ ಸಾಗರ್‌ನ ಜೊತೆಯಲ್ಲಿರುವುದಾಗಿಯೂ ಬಂದು ಕರೆದುಕೊಂಡು ಹೋಗುವಂತೆ ತಿಳಿಸಿದ್ದು ನವೀನ್‌ರವರು ಬೈಕಿನಲ್ಲಿ ಮುಳ್ಳುಸೋಗೆಯ ಬಳಿ ಹೋದಾಗ ಅಲ್ಲಿ ಸಾಗರ್‌ರವರು ರಿಕ್ಷಾದಿಂದ ಇಳಿದು ನವೀನರವರ ಬೈಕನ್ನು ಅಡ್ಡಗಟ್ಟಿ ಹಳ ವೈಷಮ್ಯದಿಂದ ನವೀನರವರ ಮೇಲೆ ಕೊಲೆ ಮಾಡುವ ಉದ್ದೇಶದಿಂದ ಚಾಕುವಿನಿಂದ ತಿವಿದು ಹಲ್ಲೆ ಮಾಡಿ ಗಾಯಗೊಳಿಸಿರುವುದಾಗಿ ನೀಡಿದ ದೂರಿನ ಮೇರೆಗೆ ಕುಶಾಲನಗರ ಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 25-02-2021 02:47 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ