ಅಭಿಪ್ರಾಯ / ಸಲಹೆಗಳು

ಹಲ್ಲೆ ಪ್ರಕರಣ

ದಿನಾಂಕ 22/05/2022ರಂದು ಮಡಿಕೇರಿ ನಗರದ ಮಲ್ಲಿಕಾರ್ಜುನ ನಗರ ನಿವಾಸಿ ತನುಜಾವತಿ ಎಂಬವರು ಮನೆಯಲ್ಲಿರುವಾಗ ಅವರ ಮನೆಗೆ ಮಲ್ಲಿಕಾರ್ಜುನ ನಗರದ ಗಾಯತ್ರಿ, ಸಂಧ್ಯಾ, ಶಾರದಾ, ಸ್ವಾತಿ ಮತ್ತು ಈಶ್ವರಿ ಎಂಬವರು ಅಕ್ರಮ ಪ್ರವೇಶ ಮಾಡಿ ಹಳೆಯ ದ್ವೇಷದಿಂದ ತನುಜಾವತಿಯವರೊಂದಿಗೆ ಜಗಳವಾಡಿ ತನಜಾವತಿ, ಅವರ ಪತಿ ಮಹದೇವ ಮತ್ತು ತಂಗಿ ಉಮಾವತಿಯವರ ಮೇಲೆ ಕೈಯಿಂದ ಹೊಡೆದು ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿರುವುದಾಗಿ ನೀಡಿದ ದೂರಿನ ಮೇರೆಗೆ ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

 

ಅಕ್ರಮ ಮದ್ಯ ಮಾರಾಟ ಪ್ರಕರಣ

ದಿನಾಂಕ 24/05/2022ರಂದು ಶನಿವಾರಸಂತೆ ಬಳಿಯ ಶಾಂತಪುರ ಗ್ರಾಮದ ನಿವಾಸಿ ಶಿವಪ್ಪ ಎಂಬವರು ಅವರ ಮನೆಯ ಕಾರ್‌ ಶೆಡ್‌ನಲ್ಲಿ ಸಾರ್ವಜನಿಕರಿಗೆ ಅಕ್ರಮವಾಗಿ ಮದ್ಯಪಾನ ಮಾಡಲು ಅನುವು ಮಾಡಿಕೊಡುತ್ತಿರುವುದಾಗಿ ದೊರೆತ ಮಾಹಿತಿಯ ಮೇರೆಗೆ ಶನಿವಾರಸಂತೆ ಠಾಣೆಯ ಪಿಎಸ್‌ಐ ಗೋವಿಂದರಾಜುರವರು ಸ್ಥಳಕ್ಕೆ ತೆರಳಿ ಆರೋಪಿ ಶಿವಪ್ಪನವರು ಸಾರ್ವಜನಿಕರಿಗೆ ಸರ್ಕಾರದ ಪರವಾನಗಿ ಇಲ್ಲದೆ ಮದ್ಯಪಾನ ಮಾಡಲು ಅನುವು ಮಾಡಿಕೊಟ್ಟಿದ್ದನ್ನು ಪತ್ತೆ ಹಚ್ಚಿ 12 ಟೆಟ್ರಾ ಪ್ಯಾಕೆಟ್‌ ಮದ್ಯವನ್ನು ವಶಪಡಿಸಿಕೊಂಡು ಶನಿವಾರಸಂತೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ಇತ್ತೀಚಿನ ನವೀಕರಣ​ : 25-05-2022 03:35 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080